10:57 AM Saturday4 - October 2025
ಬ್ರೇಕಿಂಗ್ ನ್ಯೂಸ್
Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ…

ಇತ್ತೀಚಿನ ಸುದ್ದಿ

Bangalore | ಮಹಿಳೆಯರು ಸುರಕ್ಷಿತವಾಗಿ ಸಂಚರಿಸಲು ಮಹಿಳಾ ಆಟೋ ಚಾಲಕಿಯರ ಸಂಖ್ಯೆ ಹೆಚ್ಚಲಿ: ಶಾಸಕ ಎಸ್‌. ಸುರೇಶ್‌ ಕುಮಾರ್‌

07/04/2025, 20:59

ಬೆಂಗಳೂರು(reporterkarnataka.com): ಮಹಿಳಾ ಆಟೋ ಚಾಲಕಿರ ಸಂಖ್ಯೆ ಹೆಚ್ಚಾದರೆ, ಬೆಂಗಳೂರಿನಲ್ಲಿ ಮಹಿಳೆಯರು ಇನ್ನಷ್ಟು ಸುರಕ್ಷಿತವಾಗಿ ಆಟೋ ಸಂಚಾರ ಮಾಡಲು ಮುಂದಾಗುತ್ತಾರೆ ಎಂದು ಶಾಸಕ ಎಸ್‌. ಸುರೇಶ್‌ ಕುಮಾರ್‌ ಅಭಿಪ್ರಾಯಪಟ್ಟರು.
ಬಿ.ಪ್ಯಾಕ್ ಹಾಗೂ ಆದರ್ಶ ಆಟೋ ಸಹಯೋಗದಲ್ಲಿ ”ಮಹಿಳೆಯರಿಗೆ ಉಚಿತ ಆಟೋ ಚಾಲನಾ ತರಬೇತಿ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಗರದಲ್ಲಿ ಆಟೋ ಬಳಸುವವರ ಪೈಕಿ ಮಹಿಳೆಯರೇ ಹೆಚ್ಚು. ಆದರೆ, ಕೆಲವೊಂದು ಸಂದರ್ಭದಲ್ಲಿ ಮಹಿಳೆಯರ ಮೇಲೆ ಕಿರುಕುಳದಂತ ಸುದ್ದಿ ಕೇಳಿಬರುತ್ತವೆ, ಮಹಿಳೆಯರೇ ಆಟೋ ಚಾಲನೆಗೆ ಇಳಿದರೆ, ಇತರೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚು ಸುರಕ್ಷಿತವಾಗಿ ಹಾಗೂ ಧೈರ್ಯವಾಗಿ ಯಾವ ಸಂದರ್ಭದಲ್ಲಾದರೂ ಆಟೋದಲ್ಲಿ ಸಂಚಾರ ಮಾಡಲು ಮುಂದಾಗುತ್ತಾರೆ. ಹೀಗಾಗಿ ಮಹಿಳೆಯರು ಹೆಚ್ಚು ಹೆಚ್ಚು ಆಟೋ ಚಾಲನಾ ವೃತ್ತಿಗೆ ಆಗಮಿಸಲಿ. ಇದರಿಂದ ಸ್ತ್ರೀ ಆರ್ಥಿಕವಾಗಿಯೂ ಸಬಲೀಕರಣರಾಗಲಿದ್ದಾರೆ ಎಂದು ಹೇಳಿದರು.
ಇಂದು ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸಿದ್ದಾರೆ. ಆಟೋ ಚಾಲನೆಯಲ್ಲೂ ಯಾರಿಗೇನು ಕಡಿಮೆ ಇಲ್ಲದಂತೆ ಮುಂದಾಗುತ್ತಿರುವುದು ಅಭಿನಂದನಾರ್ಹ. ಆಸಕ್ತ ಮಹಿಳೆಯರಿಗೆ ಉಚಿತವಾಗಿ ತರಬೇತಿ ನೀಡುವಂತಹ ಕೆಲಸ ಮಾಡುತ್ತಿರುವ ಬಿ.ಪ್ಯಾಕ್‌ ಮತ್ತು ಆದರ್ಶ ಆಟೋ ಸಂಸ್ಥೆಯ ಕೆಲಸ ಶ್ಲಾಘಿಸುವೆ, ಈ ಉಚಿತ ತರಬೇತಿ ಕಾರ್ಯಕ್ರಮ ಇತರೆ ಭಾಗಗಲ್ಲೂ ಪ್ರಾರಂಭಿಸಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿ.ಪ್ಯಾಕ್ ಸದಸ್ಯರಾದ ಮಿಮಿ ಪಾರ್ಥಸಾರಥಿ, ಅನಿಶಾ ಭಂಡಾರಿ, ಡಾ. ಸಂಪತ್ ಸಿ, ರಾಘವೇಂದ್ರ ಪೂಜಾರಿ, ದೇವಿಕಾ ರಾಜ್ ಹಾಗೂ ತರಬೇತಿದಾರರದ ಪ್ರಭಾವತಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು