3:25 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Bangalore | ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

02/11/2025, 19:37

ಬೆಂಗಳೂರು(reporterkarnataka.com): ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಗೃಹ ಕಚೇರಿ ಕೃಷ್ಣದಲ್ಲಿ “ಚೆನ್ನಡ ಹಾಕಿ ಪಂದ್ಯಾವಳಿ”ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯಾ ಗೇಮ್ಸ್ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು.
ಕೊಡವ ಸಂಸ್ಕೃತಿ ತನ್ನದೇ ಆದ ಭಿನ್ನತೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬಂದಿದೆ. ಇದು ನಮ್ಮ ಸಂಸ್ಕೃತಿಯ ಹೆಮ್ಮೆ ಎಂದರು.


2026ರ ಮೇ ತಿಂಗಳಲ್ಲಿ ನಡೆಯುವ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂಪಾಯಿ ಅನುದಾನ ಕೊಡುತ್ತೇವೆ. ಪಂದ್ಯಾವಳಿ ನೋಡಲು ನಾನೂ ಬರುತ್ತೇನೆ ಎಂದು ಭರವಸೆ ನೀಡಿದರು.
ಶಾಸಕರೂ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಮತ್ತು ಸಚಿವರಾದ ಬೋಸರಾಜು, ಬೈರತಿ ಸುರೇಶ್ ಮತ್ತು ಶಿವರಾಜ್ ತಂಗಡಗಿ ಸೇರಿ ಕೊಡವ ಸಮುದಾಯದ ಎಲ್ಲಾ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು