5:38 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್ ಗೆ ನೋ ಎಂಟ್ರಿ!

09/08/2025, 22:29

ಬೆಂಗಳೂರು(reporterkarnataka.com):ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಳಿನ ಬೆಂಗಳೂರು ಕಾರ್ಯಕ್ರಮಕ್ಕೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರಿಗೆ ಆಹ್ವಾನವಿಲ್ಲದ ವಿಚಾರ ಬೆಳಕಿಗೆ ಬಂದಿದೆ.
ಬಿಜೆಪಿಯ ಹಿರಿಯ ನಾಯಕರೂ, ಈ ಹಿಂದೆ ಬಿಜೆಪಿ ಸರಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಆರ್. ಅಶೋಕ್ ಅವರಿಗೆ ಬೆಂಗಳೂರಿನಲ್ಲಿ ನಾಳೆ ನಡೆಯಲಿರುವ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸುವ ಸಮಾರಂಭಕ್ಕೆ ನೋ ಎಂಟ್ರಿ ಮಾಡಲಾಗಿದೆ. ಸಮಾರಂಭದ ವೇದಿಕೆಯಲ್ಲಿ ಕೇವಲ 10 ಮಂದಿಗೆ ಮಾತ್ರ ಆಸನದ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಇಬ್ಬರು ರೈಲ್ವೆ ಸಚಿವರು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸೇರಿದಂತೆ 10 ಮಂದಿಗೆ ಮಾತ್ರ ವೇದಿಕೆ ಏರುವ ಅವಕಾಶ ನೀಡಲಾಗಿದೆ.
ಪ್ರಧಾನಿ ಮೋದಿ ಅವರು ನಾಳೆ(ಆಗಸ್ಟ್ 10 ) ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.
ಬೆಂಗಳೂರಿನ ಕೆಎಸ್ ಆರ್ ರೈಲು ನಿಲ್ದಾಣದಲ್ಲಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಅವರು ಹಸಿರು ನಿಶಾನೆ ತೋರಲಿದ್ದಾರೆ. ನಂತರ, ಬೆಂಗಳೂರು ಮೆಟ್ರೋದ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿ, ಆರ್ ವಿ ರಸ್ತೆ (ರಾಗಿಗುಡ್ಡ) ಯಿಂದ ಎಲೆಕ್ಟ್ರಾನಿಕ್ ಸಿಟಿ ನಿಲ್ದಾಣದವರೆಗೆ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ.
ಪ್ರಧಾನಮಂತ್ರಿ ಅವರು ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೆಂಗಳೂರಿನಲ್ಲಿ ನಗರ ಸಂಪರ್ಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಬೆಂಗಳೂರು ಮೆಟ್ರೋ ಹಂತ-2 ಯೋಜನೆಯಡಿಯಲ್ಲಿ ಆರ್.ವಿ. ರಸ್ತೆ (ರಾಗಿಗುಡ್ಡ) ಯಿಂದ ಬೊಮ್ಮಸಂದ್ರವರೆಗಿನ ಹಳದಿ ಮಾರ್ಗವನ್ನು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ. ಸುಮಾರು 7,160 ಕೋಟಿ ರೂ. ವೆಚ್ಚದ ಈ ಮಾರ್ಗವು 19 ಕಿ.ಮೀ.ಗಿಂತ ಹೆಚ್ಚು ಉದ್ದವಿದ್ದು, 16 ನಿಲ್ದಾಣಗಳನ್ನು ಹೊಂದಿದೆ. ಈ ಹಳದಿ ಮಾರ್ಗದ ಉದ್ಘಾಟನೆಯೊಂದಿಗೆ, ಬೆಂಗಳೂರಿನಲ್ಲಿ ಮೆಟ್ರೋ ಕಾರ್ಯಾಚರಣೆಯ ಜಾಲವು 96 ಕಿ.ಮೀ.ಗಳಿಗಿಂತ ಹೆಚ್ಚಾಗುತ್ತದೆ ಮತ್ತು ಈ ಪ್ರದೇಶದ ಜನರಿಗೆ ಸೇವೆ ಒದಗಿಸುತ್ತದೆ.
ಪ್ರಧಾನಮಂತ್ರಿ ಅವರು 15,610 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದ ಬೆಂಗಳೂರು ಮೆಟ್ರೋ ಹಂತ-3 ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಯ ಒಟ್ಟು ಉದ್ದ 44 ಕಿ.ಮೀ.ಗಳಿಗಿಂತ ಹೆಚ್ಚು ಮತ್ತು 31 ಎತ್ತರದ ನಿಲ್ದಾಣಗಳನ್ನು ಹೊಂದಿರುತ್ತದೆ. ಈ ಮೂಲಸೌಕರ್ಯ ಯೋಜನೆಯು ನಗರದ ವಸತಿ, ಕೈಗಾರಿಕೆ, ವಾಣಿಜ್ಯ ಮತ್ತು ಶೈಕ್ಷಣಿಕ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಸಾರಿಗೆ ಅಗತ್ಯಗಳನ್ನು ಪೂರೈಸುತ್ತದೆ.
ಪ್ರಧಾನಮಂತ್ರಿ ಅವರು ಬೆಂಗಳೂರಿನಿಂದ ಮೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಇವುಗಳಲ್ಲಿ ಬೆಂಗಳೂರಿನಿಂದ ಬೆಳಗಾವಿ, ಅಮೃತಸರದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗ್ಪುರ್ (ಅಜ್ನಿ) ದಿಂದ ಪುಣೆ ರೈಲುಗಳು ಸೇರಿವೆ. ಈ ಹೈಸ್ಪೀಡ್ ರೈಲುಗಳು ಪ್ರಾದೇಶಿಕ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸುತ್ತವೆ, ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತವೆ ಮತ್ತು ಪ್ರಯಾಣಿಕರಿಗೆ ವಿಶ್ವ ದರ್ಜೆಯ ಪ್ರಯಾಣದ ಅನುಭವವನ್ನು ಒದಗಿಸುತ್ತವೆ.

ಇತ್ತೀಚಿನ ಸುದ್ದಿ

ಜಾಹೀರಾತು