6:14 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ

01/07/2026, 14:30

ಬೆಂಗಳೂರು ನಗರದಲ್ಲಿ ಮತ್ತೆ ಅಕ್ರಮ ಬಾಂಗ್ಲಾದೇಶಿಗರು ಪತ್ತೆಯಾಗಿದ್ದಾರೆ. ಪಶ್ಚಿಮ ಬಂಗಾಳ ಮೂಲಕ ಭಾರತಕ್ಕೆ ಬಂದು ನಗರದಲ್ಲಿ ಅಕ್ರಮವಾಗಿ ವಾಸವಾಗಿ ದಲ್ಲದೆ, ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ 12 ಮಂದಿ ಬಾಂಗ್ಲಾ ದೇಶದ ಪ್ರಜೆಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಾಂಗ್ಲಾದೇಶ ಮೂಲದ ಸುಹಾಗ್‌ ಮೊಂನ್ಸೂರಲಿ (29) ಮತ್ತು ಮುಕಲ್‌ (32) ಎಂಬುವರನ್ನು ಬಂಧಿಸಲಾಗಿದೆ.
ಇತರೆ 10 ಮಂದಿ ಮಹಿಳೆಯರನ್ನು ವಶಕ್ಕೆ ಪಡೆದು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ) ಅಧಿಕಾರಿಗಳಿಗೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಬಾಣಸವಾಡಿ ಮತ್ತು ಹೆಣ್ಣೂರು ಠಾಣೆಗಳ ವ್ಯಾಪ್ತಿಯಲ್ಲಿ ಮಾನವ ಕಳ್ಳ ಸಾಗಣೆ ಮೂಲಕ ಕೆಲ ಮಹಿಳೆಯರನ್ನು ಬಾಂಗ್ಲಾ ದೇಶದಿಂದ ಕರೆಸಿಕೊಂಡು ವೇಶ್ಯಾವಾಟಿಕೆ ದಂಧೆಯಲ್ಲಿ ದೂಡಿರುವ ಮಾಹಿತಿ ಸಿಕ್ಕಿತ್ತು. ಈ ಮಾಹಿತಿ ಪಡೆದ ಸಿಸಿಬಿಯ ಮಹಿಳೆ ರಕ್ಷಣಾ ವಿಭಾಗದ ಎಸಿಪಿ ಧರ್ಮೇಂದ್ರ ಮತ್ತು ತಂಡ ಕೆಲ ದಿನಗಳ ಹಿಂದೆ ಕಾರ್ಯಾಚರಣೆ ನಡೆಸಿ ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದರು.
ಈ ವೇಳೆ ಆರೋಪಿಗಳು ಮಹಿಳೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

*ಬಾಂಗ್ಲಾದೇಶದ ದಾಖಲೆಗಳು ಪತ್ತೆ:* ಬಂಧಿತ ಇಬ್ಬರು ಆರೋಪಿಗಳು ಮತ್ತು ರಕ್ಷಣೆ ಮಾಡಿದ ಮಹಿಳೆ ಯರ ಬಳಿ ಬಾಂಗ್ಲಾ ದೇಶದ ಗುರುತಿನ ಚೀಟಿಗಳು ಹಾಗೂ ಇತರೆ ದಾಖಲೆಗಳು ಪತ್ತೆಯಾಗಿವೆ. ಅಲ್ಲದೆ, ಆರೋಪಿಗಳ ವಿಚಾರಣೆಯಲ್ಲಿ 2 ತಿಂಗಳ ಹಿಂದೆ ಪಶ್ಚಿಮ ಬಂಗಾಳ ಮಾರ್ಗವಾಗಿ ಭಾರತ ಪ್ರವೇಶಿಸಲಾಗಿತ್ತು. ಈ ವೇಳೆ ಗಡಿಭಾಗದಲ್ಲಿ ಮಧ್ಯವರ್ತಿಗಳಿಗೆ ಸಾವಿರಾರು ರೂ. ಹಣ ಕೊಟ್ಟು ಮಹಿಳೆಯರನ್ನು ಭಾರತಕ್ಕೆ ಕರೆಸಿಕೊಳ್ಳಲಾಗಿದೆ.
ಒಂದು ತಿಂಗಳಿಂದ ನಗರದಲ್ಲಿ ವಾಸವಾಗಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ. ಜಾಲ ತಾಣಗಳ ಮೂಲಕ ಮಹಿಳೆಯರ ಫೋಟೋ ಗಳನ್ನು ಹಾಕಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಪರಿಚಯಸ್ಥರ ಮೂಲಕ ಗ್ರಾಹಕರನ್ನು ಸಂಪರ್ಕಿಸಲಾಗುತ್ತಿತ್ತು ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

*ಗಡಿಪಾರಿಗೆ ಸಿದ್ದತೆ*
12 ಮಂದಿ ಬಾಂಗ್ಲಾದೇಶ ಪ್ರಜೆಗಳನ್ನು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ ಅಧಿಕಾರಿಗಳಿಗೆ ಒಪ್ಪಿಸಲಾಗಿದ್ದು, ದಾಖಲೆ ಪರಿಶೀಲಿಸಿದಾಗ ಅಕ್ರಮವಾಗಿ ಭಾರತ ಪ್ರವೇಶಿಸಿರುವುದು ಪತ್ತೆಯಾಗಿದೆ. 12 ಮಂದಿಯನ್ನು ಗಡೀಪಾರಿಗೆ ದಾಖಲೆಗಳ ಸಿದ್ಧಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಘಟನೆ ಸಂಬಂಧ ಹೆಣ್ಣೂರು ಮತ್ತು ಬಾಣಸವಾಡಿ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಸಿಸಿಬಿಯ ಮಹಿಳಾ ರಕ್ಷಣೆ ವಿಭಾಗದ ಎಸಿಪಿ ಧರ್ಮೇಂದ್ರ ಮತ್ತು ತಂಡ ಕಾರ್ಯಾಚರಣೆ ನಡೆಸಿದೆ. 4 ತಿಂಗಳ ಹಿಂದೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಾಂಗ್ಲಾದೇಶಿಗರ ಪತ್ತೆ ಬಗ್ಗೆ ರಾಜ್ಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಸಾವಿರಾರು ಮಂದಿ ಅಕ್ರಮ ಬಾಂಗ್ಲಾದೇಶಿಗರು ಪತ್ತೆಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು