7:53 AM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ

04/04/2026, 16:58

ಬೆಂಗಳೂರು(reporterkarnataka.com): ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಅವರಿಗೆ ಸೇರಿದ ಲ್ಯಾಂಬೋರ್ಗಿನಿ ಕಾರಿಗೆ ಮತ್ತೆ ಕಾನೂನು ತೊಡಕು ಉಂಟಾಗಿದೆ. ನಕಲಿ ನಂಬರ್ ಪ್ಲೇಟ್ ಬಳಸಿದ ಹಿನ್ನಲೆಯಲ್ಲಿ ಆರ್‌ಟಿಒನಿಂದ 35 ಲಕ್ಷ ರೂ. ದಂಡ ವಿಧಿಸಿದ್ದರೂ, ನಿಯಮ ಉಲ್ಲಂಘಿಸಿ ಡ್ರಿಫ್ಟಿಂಗ್ ಮಾಡಿದ್ದರಿಂದ ಪೊಲೀಸರು ಕಾರನ್ನು ವಶಕ್ಕೆ ಪಡೆದಿದ್ದಾರೆ.

ರಿಕ್ಕಿ ರೈ ಅವರು ದೆಹಲಿಯಲ್ಲಿ ಲ್ಯಾಂಬೋರ್ಗಿನಿ ಕಾರನ್ನು ಖರೀದಿ ಮಾಡಿದ್ದರು. ಬಳಿಕ ಈ ಕಾರಿಗೆ ಕರ್ನಾಟಕದ ನೋಂದಣಿ ಸಂಖ್ಯೆ ಪಡೆಯಲು ಆರ್‌ಟಿಒ ಮೂಲಕ ಬರೋಬ್ಬರಿ 5 ಲಕ್ಷ ರೂಪಾಯಿ ನೀಡಿ ‘KA 05 NR 0009’ ಎಂಬ ಫ್ಯಾನ್ಸಿ ನಂಬರ್ ಅನ್ನು ಕಾಯ್ದಿರಿಸಿದ್ದರು. ಆದರೆ, ಈ ನಂಬರ್ ಅನ್ನು ಅಧಿಕೃತವಾಗಿ ಕಾರಿಗೆ ರಿಜಿಸ್ಟರ್ ಮಾಡಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರಲಿಲ್ಲ.
ಆರ್‌ಟಿಒ ದಾಖಲೆಗಳಲ್ಲಿ ಈ ಸಂಖ್ಯೆ ಇನ್ನೂ ಅಧಿಕೃತವಾಗಿ ನೋಂದಣಿಯಾಗಿಲ್ಲದಿದ್ದರೂ, ರಿಕ್ಕಿ ರೈ ಅವರು ಇದೇ ನಂಬರ್ ಪ್ಲೇಟ್ ಅನ್ನು ಕಾರಿಗೆ ಅಳವಡಿಸಿಕೊಂಡು ರಸ್ತೆಯಲ್ಲಿ ಸಂಚರಿಸುತ್ತಿದ್ದರು. ಇದು ಕಾನೂನಿನ ಪ್ರಕಾರ ವಂಚನೆ ಮತ್ತು ನಿಯಮಬಾಹಿರ ಕೃತ್ಯವಾಗಿದೆ.
ನೋಂದಣಿ ಮಾಡಿಸದ ನಂಬರ್ ಪ್ಲೇಟ್ ಬಳಸಿದ್ದಕ್ಕಾಗಿ ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಆರ್‌ಟಿಒ ಅಧಿಕಾರಿಗಳು ರಿಕ್ಕಿ ರೈ ಅವರಿಗೆ ಬರೋಬ್ಬರಿ 35 ಲಕ್ಷ ರೂಪಾಯಿ ದಂಡ ವಿಧಿಸಿದ್ದರು.

ದಂಡ ಪಾವತಿಸಿ ನೋಂದಣಿ ಪ್ರಕ್ರಿಯೆ ಮುಗಿಸುವ ಬದಲಿಗೆ ರೈ ಅವರು ಅದೇ ಕಾರಿನಲ್ಲಿ ಬೆಂಗಳೂರಿನ ಕಬ್ಬನ್ ಪಾರ್ಕ್ ವ್ಯಾಪ್ತಿಯಲ್ಲಿ ‘ಡ್ರಿಫ್ಟಿಂಗ್’ ಮಾಡುವ ಮೂಲಕ ಸಾಹಸ ಪ್ರದರ್ಶನಕ್ಕೆ ಇಳಿದಿದ್ದರು. ಈ ವೇಳೆ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಕಾರನ್ನು ಸೀಜ್ ಮಾಡಿದ್ದರು.
ಪ್ರಸ್ತುತ, ಈ ಪ್ರಕರಣವು ವಂಚನೆಯ ಹಂತಕ್ಕೆ ತಲುಪಿದೆ. ಆರ್‌ಟಿಒದಲ್ಲಿ ರಿಜಿಸ್ಟರ್ ಆಗದ ನಂಬರ್ ಪ್ಲೇಟ್ ಬಳಸಿ ಸರ್ಕಾರಕ್ಕೆ ಮತ್ತು ಇಲಾಖೆಗೆ ವಂಚಿಸಿದ ಆರೋಪದ ಮೇಲೆ ಪೊಲೀಸರು ಮತ್ತೊಮ್ಮೆ ಕಾರನ್ನು ಸೀಜ್ ಮಾಡಿದ್ದಾರೆ. ಈ ಬಾರಿ ಕಾರನ್ನು ವಶಕ್ಕೆ ಪಡೆದು ಪಿ.ಎಫ್ ಹಾಕಿ ನ್ಯಾಯಾಲಯಕ್ಕೆ ಹಸ್ತಾಂತರಿಸಲಾಗಿದೆ. ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ರಿಕ್ಕಿ ರೈ ಅವರಿಗೆ ನೋಂದಾಯಿತ ವಿಳಾಸಕ್ಕೆ ನೊಟೀಸ್ ಕಳುಹಿಸಿದ್ದಾರೆ. ಆದರೆ, ಸದ್ಯ ಲಭ್ಯವಿರುವ ಮಾಹಿತಿಯ ಪ್ರಕಾರ ರಿಕ್ಕಿ ರೈ ಅವರು ರಷ್ಯಾದಲ್ಲಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು