ಇತ್ತೀಚಿನ ಸುದ್ದಿ
Bangalore | ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಗೋದಾಮಿನಲ್ಲಿ ಬೆಂಕಿ: ಧಗಧಗನೇ ಹೊತ್ತುರಿದ ಕೋಟ್ಯಂತರ ರೂ. ಮೌಲ್ಯದ ಉತ್ಪನ್ನ
13/05/2025, 19:14

ಬೆಂಗಳೂರು(reporterkarnataka.com): ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತುರಿದು ಕೋಟ್ಯಾಂತರ ರೂಪಾಯಿ ಮೌಲ್ಯದ ಉತ್ಪನ್ನಗಳು ಬೆಂಕಿಯಿಂದ ಹಾನಿಯಾದ ಘಟನೆ ನೆಲಮಂಗಲ ಸಮೀಪದ ಅಡಕಿಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೃಷ್ಣಪ್ಪ ಎಂಬುವರಿಗೆ ಸೇರಿದ 33 ಸಾವಿರ ಚದುರ ಅಡಿ ವಿಸ್ತೀರ್ಣವುಳ್ಳ ಬೃಹತ್ ಗೋದಾಮು ಬೆಂಕಿಗೆ ಆಹುತಿಯಾಗಿದ್ದು, ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸೋ ಕಾರ್ಯದಲ್ಲಿ ತೊಡಗಿದ್ದಾರೆ ಈ ಸಂಬಂಧ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನೆಡೆಸುತ್ತಿದ್ದಾರೆ.