8:17 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು…

ಇತ್ತೀಚಿನ ಸುದ್ದಿ

Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ ಅಧಿಕಾರಿಗಳ ಅಮಾನತು

05/06/2025, 23:54

ಬೆಂಗಳೂರು(reporterkarnataka.com): ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ಸಂಬಂಧಿಸಿದಂತೆ ಬೆಂಗಳೂರು ನಗರದ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಲು ಮುಖ್ಯಮಂತ್ರಿ ಆದೇಶ ನೀಡಿದ್ದಾರೆ.
ವಿಧಾನ ಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಬಾ ದು:ಖಕರವಾದ ವಿಚಾರ. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದರು.


ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರಾದ ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ. ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದರು.
ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸ್ಪೆಕ್ಟರ್, ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ಅವರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ. ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಮಹಾದೇವಪ್ಪ ಸೇರಿದಂತೆ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು ಎಂದು ಮುಖ್ಯಮಂತ್ರಿ ನುಡಿದರು.
ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ. ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ.
ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ ಎಂದು ಮುಖ್ಯಮಂತ್ರಿ ಹೇಳಿದರು.
ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು