12:28 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಣೆ

20/11/2025, 21:13

ಬೆಂಗಳೂರು(reporterkarnataka.com): ನಾಯಿ ಕಚ್ಚಿ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.ಪರಿಹಾರ ಘೋಷಣೆ ಮಾಡಿದೆ.
ಬೆಂಗಳೂರು ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡ ಅಥವಾ ಸಾವನ್ನಪ್ಪಿದ ಜನರಿಗೆ ಪರಿಹಾರ ಮಾರ್ಗಸೂಚಿಗಳನ್ನು (Bengaluru dog attack compensation) ಪರಿಷ್ಕರಿಸಿ ರಾಜ್ಯ ಸರ್ಕಾರ ನವೀಕರಿಸಿದ ಆದೇಶವನ್ನು ಬಿಡುಗಡೆ ಮಾಡಿದೆ.
ನಾಯಿಗಳ ದಾಳಿಯಿಂದ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆಯನ್ನು ನೀಡಲು ಹಾಗೂ ಸಾವನ್ನಪ್ಪಿದವರ ಮನೆಯ ಆರ್ಥಿಕ ಸಹಾಯಕ್ಕಾಗಿ ಈ ಪರಿಷ್ಕರಣೆ ಮಾಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ನಾಯಿ ಕಚ್ಚಿದ ಗಾಯ, ಮೂಗೇಟುಗಳು ಮತ್ತು ರಕ್ತಸ್ರಾವದ ಸಮಸ್ಯೆ, ಸೀಳುವಿಕೆ, ಇಂತಹ ಗಾಯಗಳು ಕಂಡು ಬಂದರೆ 5 ಸಾವಿರ ರೂ. ವರೆಗೆ ಪರಿಹಾರವನ್ನು ನೀಡಲಾಗುವುದು. 2023ರಲ್ಲಿ ನಾಯಿಗಳ ದಾಳಿಯಿಂದ ಗಾಯಗೊಂಡ ಅಥವಾ ಸಾವನ್ನಪ್ಪಿದವರಿಗೆ ವಿಶೇಷ ಯೋಜನೆಯನ್ನು ಮಾಡಲಾಗಿತ್ತು.ಇದೀಗ ಆ ಯೋಜನೆಯನ್ನೇ ಮುಂದುವರಿಸಲಾಗುವುದು. ಆದರೆ ಇದರಲ್ಲಿ ಕೆಲವೊಂದನ್ನು ಬದಲಾವಣೆ ಮಾಡಲಾಗಿದೆ. ಈ 5,000 ರೂ.ಗಳಲ್ಲಿ 3,500 ರೂ.ಗಳನ್ನು ನಗರಾಭಿವೃದ್ಧಿ ಇಲಾಖೆ ನೀಡುತ್ತದೆ. ಉಳಿದ 1,500 ರೂ. ಅನ್ನು ಆರೋಗ್ಯ ಇಲಾಖೆಯ ಅಡಿಯಲ್ಲಿ ಬರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ವರ್ಗಾಯಿಸಲಾಗುತ್ತದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ನಾಯಿ ಕಚ್ಚಿದ ವ್ಯಕ್ತಿಗೆ ತಕ್ಷಣದ ವೈದ್ಯಕೀಯ ಆರೈಕೆ ಸಿಗುವಂತೆ ನೋಡಿಕೊಳ್ಳುವುದು ಈ ನಿಧಿಯ ಉದ್ದೇಶವಾಗಿದೆ. ಪರಿಹಾರದ ಒಂದು ಭಾಗವನ್ನು ಆರೋಗ್ಯ ಟ್ರಸ್ಟ್‌ಗೆ ನೀಡಲಾಗುವುದು. ಸರ್ಕಾರವು ಆರಂಭಿಕ ಚಿಕಿತ್ಸಾ ವೆಚ್ಚವನ್ನು ಮುಂಗಡವಾಗಿ ಭರಿಸುವ ಯೋಜನೆಯನ್ನು ಕೂಡ ಹೊಂದಿದೆ. ಇದರಿಂದ ಯಾರಿಗೆ ಮುಂಗಡವಾಗಿ ಹಣ ಪಾವತಿ ಮಾಡಲು ಸಾಧ್ಯವಾಗುವುದಿಲ್ಲ, ಅವರಿಗೆ ಸಹಾಯವಾಗುತ್ತದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಇನ್ನು ಬೀದಿ ನಾಯಿ ದಾಳಿಯಿಂದ ಅಥವಾ ರೇಬೀಸ್‌ನಿಂದ ವ್ಯಕ್ತಿ ಸಾವನ್ನಪ್ಪಿದರೆ, ಅವರ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. ಇದರಿಂದ ಆರ್ಥಿಕ ಒತ್ತಡವನ್ನು ಎದುರಿಸುತ್ತಿರುವ ಕುಟುಂಬಗಳಿಗೆ ಸಹಾಯವಾಗುತ್ತದೆ. ನಗರದಲ್ಲಿ ಬೀದಿ ನಾಯಿಗಳ ದಾಳಿಗೆ ಜನರಲ್ಲಿ ಆತಂಕ ಹೆಚ್ಚಾಗಿದೆ. ಅಂತಹ ಘಟನೆಗಳು ನಡೆದಾಗ ತಕ್ಷಣದ ಚಿಕಿತ್ಸೆಯನ್ನು ನೀಡಲು ಈ ಯೋಜನೆಯನ್ನು ಮಾಡಲಾಗಿದೆ. ಈ ಮೂಲಕ ನಾಯಿಗಳ ದಾಳಿಯಿಂದ ಆಗಿರುವ ಗಾಯಗಳಿಗೆ ಸರಿಯಾದ ಚಿಕಿತ್ಸೆ ನೀಡಿ, ಗುಣಮುಖ ಮಾಡುವುದು ಸರ್ಕಾರ ಉದ್ದೇಶವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು