ಇತ್ತೀಚಿನ ಸುದ್ದಿ
Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ ಭೇಟಿಯಾಗಿ ಹೆತ್ತವರ ಮನವಿ
10/05/2025, 21:45

ಬೆಂಗಳೂರು(reporterkarnataka.com): ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಹಸ್ತಾಂತರಿಸುವಂತೆ
ಒತ್ತಾಯಿಸಿ ಮೃತ ಸುಹಾಸ್ ನ ಹೆತ್ತವರು ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ವಿಧಾನ ಸಭಾ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರು ಹಾಗೂ ಸಂಸದರು ಉಪಸ್ಥಿತರಿದ್ದರು.