2:42 PM Monday4 - August 2025
ಬ್ರೇಕಿಂಗ್ ನ್ಯೂಸ್
Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ…

ಇತ್ತೀಚಿನ ಸುದ್ದಿ

ಬೆಂಗಳೂರು ನಗರ ಜಿಲ್ಲೆ: 18.85 ಕೋಟಿ ಮೌಲ್ಯದ 8 ಎಕರೆಗೂ ಅಧಿಕ ಅಕ್ರಮ ಒತ್ತುವರಿ ತೆರವು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ

29/03/2025, 23:06

ಬೆಂಗಳೂರು (reporterkarnataka.com): ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.18.85 ಕೋಟಿ ಅಂದಾಜು ಮೌಲ್ಯದ ಒಟ್ಟು 8 ಎಕರೆ 0.27 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಯಿತು.


ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಗುಂಡುತೋಪು, ಸ್ಮಶಾನ, ಕುಂಟೆ, ಸರ್ಕಾರಿ ಮುಫತ್ ಕಾವಲ್, ಸರ್ಕಾರಿ ಕಟ್ಟೆ ಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.
ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೆಂಗೇರಿ ಹೋಬಳಿಯ ಅಗರ ಗ್ರಾಮದ ಸ.ನಂ 28ರ ಸರ್ಕಾರಿ ಮುಫತ್ ಕಾವಲ್ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆ 0.05 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 2.00 ಕೋಟಿಗಳಾಗಿರುತ್ತದೆ. ಕೆಂಗೇರಿ ಹೋಬಳಿಯ ಕಣಮಿಣಕೆ ಗ್ರಾಮದ ಸ.ನಂ 84 ರ ಸರ್ಕಾರಿ ಕಟ್ಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.12 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 2.20 ಕೋಟಿಗಳಾಗಿರುತ್ತದೆ.
ಆನೇಕಲ್ ತಾಲ್ಲೂಕಿನ ಸರ್ಜಾಪುರ ಹೋಬಳಿಯ ತಿಗಳಚೌಡೇನಹಳ್ಳಿ ಗ್ರಾಮದ ಸ.ನಂ 81ರ ಕುಂಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.75 ಕೋಟಿಗಳಾಗಿರುತ್ತದೆ.
ಯಲಹಂಕ ತಾಲ್ಲೂಕಿನ ಹೆಸರಘಟ್ಟ ಹೋಬಳಿಯ ಅರಕೆರೆ ಗ್ರಾಮದ ಸ.ನಂ 127 ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.10 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.20 ಕೋಟಿಗಳಾಗಿರುತ್ತದೆ. ಹೆಸರಘಟ್ಟ ಹೋಬಳಿಯ ಮತ್ಕೂರು ಗ್ರಾಮದ ಸ.ನಂ. 64ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.07 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.85 ಕೋಟಿಗಳಾಗಿರುತ್ತದೆ. ಜಾಲ ಹೋಬಳಿಯ ಹುತ್ತನಹಳ್ಳಿ ಗ್ರಾಮದ ಸ.ನಂ 73ರ ಸರ್ಕಾರಿ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 2 ಎಕರೆಗಳಾಗಿದ್ದು ಅಂದಾಜು ಮೌಲ್ಯ ರೂ 2.00 ಕೋಟಿಗಳಾಗಿರುತ್ತದೆ.
ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಕಡಬಗೆರೆ ಗ್ರಾಮದ ಸ.ನಂ : 63ರ ಸರ್ಕಾರಿ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.16 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 1.00 ಕೋಟಿಗಳಾಗಿರುತ್ತದೆ. ದಾಸನಪುರ ಹೋಬಳಿಯ ಕಡಬಗೆರೆ ಗ್ರಾಮದ ಸ.ನಂ : 95ರ ಸರ್ಕಾರಿ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.40 ಕೋಟಿಗಳಾಗಿರುತ್ತದೆ. ದಾಸನಪುರ ಹೋಬಳಿಯ ಹುಲ್ಲೇಗೌಡೇನಹಳ್ಳಿ ಗ್ರಾಮದ ಸ.ನಂ : 58ರ ಸರ್ಕಾರಿ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 3 ಎಕರೆಗಳಾಗಿದ್ದು, ಅಂದಾಜು ಮೌಲ್ಯ ರೂ 6.00 ಕೋಟಿಗಳಾಗಿರುತ್ತದೆ.
ಬೆಂಗಳೂರು ಪೂರ್ವ ತಾಲ್ಲೂಕಿನ ವರ್ತೂರು ಹೋಬಳಿಯ ಸೂಲಿಕುಂಟೆ ಗ್ರಾಮದ ಸ.ನಂ 48ರ ಗುಂಡು ತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.02 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.15 ಕೋಟಿಗಳಾಗಿರುತ್ತದೆ. ಬಿದರಹಳ್ಳಿ ಹೋಬಳಿಯ ಆದೂರು ಗ್ರಾಮದ ಸ.ನಂ: 74ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆಯಾಗಿದ್ದು, ಅಂದಾಜು ಮೌಲ್ಯ ರೂ 2.00 ಕೋಟಿಗಳಾಗಿರುತ್ತದೆ. ಬಿದರಹಳ್ಳಿ ಹೋಬಳಿಯ ದೊಡ್ಡಬನಹಳ್ಳಿ ಗ್ರಾಮದ ಸ.ನಂ: 3ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.01 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ.0.10 ಕೋಟಿಗಳಾಗಿರುತ್ತದೆ. ವರ್ತೂರು ಹೋಬಳಿಯ ಗುಂಜೂರು ಗ್ರಾಮದ ಸ.ನಂ: 244ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.04 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 1.20 ಕೋಟಿಗಳಾಗಿರುತ್ತದೆ.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಯಾದ ಜಗದೀಶ್ ಕೆ ನಾಯಕ್ ಹಾಗೂ ತಾಲ್ಲೂಕಿನ ತಹಶೀಲ್ದಾರ್ ರವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು