ಇತ್ತೀಚಿನ ಸುದ್ದಿ
Bangaluru | 4 ಷರತ್ತುಗಳೊಂದಿಗೆ ಜಮೀನು ನೀಡಲು ಒಪ್ಪಿಗೆ: ರೈತರ ನಿಯೋಗ ಮುಖ್ಯಮಂತ್ರಿ ಭೇಟಿ
13/07/2025, 11:16

ಬೆಂಗಳೂರು(reporterkarnataka.com): ದೇವನಹಳ್ಳಿ ತಾಲ್ಲೂಕು, ಚನ್ನರಾಯಪಟ್ಟಣ ಹೋಬಳಿಯ ರೈತ ಹೋರಾಟ ಸಮಿತಿಯ ನಿಯೋಗ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಅರ್ಪಿಸಿತು. ನಾಲ್ಕು ಶರತ್ತುಗಳನ್ನು ಹಾಕಿ ತಮ್ಮ ಜಮೀನು ಖರೀದಿಗೆ ಒಪ್ಪಿಗೆ ಇರುವುದಾಗಿ ನಿಯೋಗ ತನ್ನ ಮನವಿಯಲ್ಲಿ ತಿಳಿಸಿದೆ.
ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯಿಂದ ಆಗಮಿಸಿದ್ದ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ 449 ಎಕರೆಯನ್ನು ತಾವು ನೀಡಲು ಸಿದ್ಧವಿರುವುದಾಗಿ ತಿಳಿಸಿ, ಸ್ವಾಧೀನ ಪಡಿಸಿಕೊಳ್ಳುವ ಭೂಮಿಗೆ ನ್ಯಾಯಯುತವಾದ ಸೂಕ್ತ ಬೆಲೆ ನಿಗದಿ ಪಡಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಸಚಿವರಾದ ಕೆ ಎಚ್ ಮುನಿಯಪ್ಪ, ಬಿ ಎಸ್ ಸುರೇಶ್, ಕಾನೂನು ಸಲಹೆಗಾರರಾದ ಎ ಎಸ್ ಪೊನ್ನಣ್ಣ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಉಪಸ್ಥಿತರಿದ್ದರು