12:09 AM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

Bangaluru | ಯು.ಆರ್.ರಾವ್ ಭವನದಲ್ಲಿ ಶೀಘ್ರದಲ್ಲೇ ಗಗನಯಾತ್ರಿ ಶುಭಾಂಶು ಶುಕ್ಲ ಜತೆ ಸಂವಾದ ಕಾರ್ಯಕ್ರಮ

09/09/2025, 16:17

ಬೆಂಗಳೂರು(reporterkarnataka.com): ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಇಸ್ರೋ ಅಧ್ಯಕ್ಷರಾದ ಡಾ. ವಿ ನಾರಾಯಣ್‌ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನಲೆಯಲ್ಲಿ ಇಸ್ರೋ ಹಾಗೂ ಜೆಎನ್‌ಪಿ ಸಹಯೋಗದಲ್ಲಿ ಶೀಘ್ರದಲ್ಲೇ ಜವಾಹರಲಾಲ್ ನೆಹರು ಪ್ಲಾನೆಟೇರಿಯಂನ ಯು.ಆರ್.ರಾವ್ ಭವನದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಅವರು, ನಮ್ಮ ಮನವಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಇಸ್ರೋ ಅಧ್ಯಕ್ಷರಾದ ಡಾ. ವಿ. ನಾರಾಯಣನ್‌ ಅವರಿಗೆ ಸಚಿವರು ಧನ್ಯವಾದ ತಿಳಿಸಿದ್ದಾರೆ. ನಮ್ಮ ಮನವಿಯಂತೆ, ಆಕ್ಸಿಯಂ-4 ಮಿಷನ್‌ನ ಅಂತರಿಕ್ಷ ಯಾತ್ರಿಕರಾದ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲ ಅವರೊಂದಿಗೆ ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಇಸ್ರೋ ಒಪ್ಪಿಗೆ ನೀಡಿದೆ. ಈ ಸಂವಾದ ಕಾರ್ಯಕ್ರಮವು ಶೀಘ್ರದಲ್ಲೇ ಜವಾಹರಲಾಲ್‌ ನೆಹರು ಪ್ಲಾನೆಟೇರಿಯಂನ ಉ.ಆರ್‌.ರಾವ್ ಭವನದಲ್ಲಿ ನಡೆಯಲಿದೆ. ಬೆಂಗಳೂರಿನ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಹೈಸ್ಕೂಲ್ ಹಾಗೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೇರವಾಗಿ ಅಂತರಿಕ್ಷ ಯಾತ್ರಿಕರೊಂದಿಗೆ ಸಂವಾದಿಸಲು ಇದು ಅವಕಾಶ ಕಲ್ಪಿಸಲಿದೆ. ರಾಜ್ಯದ ಇನ್ನಿತರೆ ಭಾಗಗಳ ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಾದೇಶಿಕ ವಿಜ್ಞಾನ ಕೇಂದ್ರಗಳಲ್ಲಿ ಲೈವ್ ಸ್ಟ್ರೀಮಿಂಗ್ ಮೂಲಕ ವ್ಯವಸ್ಥೆ ಮಾಡಲಾಗುವುದು.
ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ವಿಜ್ಞಾನ, ಸಂಶೋಧನೆ ಹಾಗೂ ಬಾಹ್ಯಾಕಾಶ ಅನ್ವೇಷಣೆಯತ್ತ ಪ್ರೇರೇಪಿಸುತ್ತವೆ. ಕರ್ನಾಟಕವು ಸದಾ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಪ್ರಗತಿಯಲ್ಲಿ ಮುಂಚೂಣಿಯಲ್ಲಿದ್ದು, ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಕುತೂಹಲ ಮತ್ತು ಹೊಸ ಆಲೋಚನೆಯನ್ನು ಬೆಳೆಸಲು ನೆರವಾಗುತ್ತವೆ ಎಂದು ಅವರು ತಿಳಿಸಿದರು.
“ಕರ್ನಾಟಕದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಬದ್ದವಾಗಿದೆ. ಇಸ್ರೋ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗುತ್ತಿರುವ ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಅಂತರಿಕ್ಷ ಯಾತ್ರಿಕರೊಂದಿಗೆ ಸಂವಾದಿಸಲು ಅಪರೂಪದ ಅವಕಾಶ ಒದಗಿಸುತ್ತದೆ. ಇದು ಅವರಲ್ಲಿ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದುವರಿಯುವ ಉತ್ಸಾಹವನ್ನು ಇನ್ನಷ್ಟು ಪೋಷಿಸಲಿದೆ,” ಎಂದು ಸಚಿವ ಭೋಸರಾಜು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕಾರ್ಯಕ್ರಮವನ್ನು ಇಸ್ರೋ ಮಾನವ ಬಾಹ್ಯಾಕಾಶ ಹಾರಾಟ ಕೇಂದ್ರ, ಬೆಂಗಳೂರಿನ ಸಹಯೋಗದೊಂದಿಗೆ ಶೀಘ್ರದಲ್ಲೇ ಆಯೋಜಿಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು