5:46 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

Bangaluru | ಪಿಡಿಪಿಎಸ್‌ಯಡಿ ಈರುಳ್ಳಿ ಖರೀದಿ ಪ್ರಯತ್ನ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್

24/10/2025, 15:37

ಬೆಂಗಳೂರು(reporterkarnataka.com): ಈರುಳ್ಳಿ ಬೆಲೆ ಕುಸಿತ ಹಿನ್ನೆಲೆಯಲ್ಲಿ ಪಿಡಿಪಿಎಸ್‌ (ಪ್ರೈಸ್‌ ಡಿಪಿಷಿಯನ್ಸಿ ಪ್ರೊಕ್ಯೂರ್‌ಮೆಂಟ್‌ ಸ್ಕೀಂ) ಅಡಿಯಲ್ಲಿ ಖರೀದಿಸುವ ಪ್ರಯತ್ನ ನಡೆದಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಸುರಿದ ಭಾರೀ ಮಳೆಗೆ ಕಟಾವಿಗೆ ಬಂದಿರುವ ಈರುಳ್ಳಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕಳೆದ ಸಾಲಿನ ಸರಾಸರಿ ಈರುಳ್ಳಿ ಮಾರುಕಟ್ಟೆ ಬೆಲಗೆ ಹೋಲಿಕೆ ಮಾಡಿದರೆ ಪ್ರಸಕ್ತ ಸಾಲಿನಲ್ಲಿ ಮಾರಾಟ ದರ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಇದೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪಿಡಿಪಿಎಸ್‌ಅಡಿಯಲ್ಲಿ ಈರುಳ್ಳಿ ಖರೀದಿ ಮಾಡಲು ಅನುಮತಿ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಸೇರಿ ಒಟ್ಟು 2.05 ಲಕ್ಷ ಹೆಕ್ಟೇರ್‌ಪ್ರದೇಶದಲ್ಲಿ ಈರುಳ್ಳಿ ಬೆಳೆಯಲಾಗುತ್ತಿದ್ದು, ವಾರ್ಷೀಕ ಉತ್ಪನ್ನ 27.00 ಲಕ್ಷ ಮೆಟ್ರಕ್‌ ಟನ್‌ಗಳಾಗಿದೆ. ಪ್ರಮುಖವಾಗಿ ವಿಜಯಪುರ, ಚಿತ್ರದುರ್ಗ, ಬಾಗಲಕೋಟೆ, ವಿಜಯ ನಗರ, ಬೆಳಗಾವಿ, ಧಾರವಾಡ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದೆ.
ಅತಿಯಾದ ಮಳೆಗೆ ಕಟಾವಿಗೆ ಬಂದ ಈರುಳ್ಳಿ ಬೆಳೆ ಹಾನಿಯಾಗಿ, ದಿಢೀರ್‌ ಬೆಲೆ ಕುಸಿತಗೊಂಡಿದ್ದು, ಜಮೀನಿನಲ್ಲೇ ಈರುಳ್ಳಿ ಬೆಳೆ ನಾಶವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಭೆ ಸೇರಿ ಚರ್ಚೆ ಮಾಡಿದ್ದು, ಎಂಐಎಸ್‌ (ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ) ಅಡಿಯಲ್ಲಿ ಖರೀದಿಸಲು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಶಿಫಾರಸ್ಸು ಮಾಡಿದ್ದರು.
ಆದರೆ ಪಿಡಿಪಿಎಸ್‌ಅಡಿ ಈರುಳ್ಳಿ ಖರೀದಿ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು