3:41 PM Friday24 - October 2025
ಬ್ರೇಕಿಂಗ್ ನ್ಯೂಸ್
Bangaluru | ಪಿಡಿಪಿಎಸ್‌ಯಡಿ ಈರುಳ್ಳಿ ಖರೀದಿ ಪ್ರಯತ್ನ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ… Bangaluru | ರಾಜ್ಯ ಸರಕಾರಕ್ಕೆ ಕೆಎಸ್ ಡಿಎಲ್ ರಿಂದ 135 ಕೋಟಿ ಡಿವಿಡೆಂಡ್… ವಿರಾಜಪೇಟೆ ಲಾಡ್ಜ್‌ನಲ್ಲಿ ಯುವತಿ ಜತೆ ತಂಗಿದ್ದ ಯುವಕನ ಸಾವಿಗೆ ಕಿಡ್ನಿ ವೈಫಲ್ಯ ಕಾರಣ:… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ ಕೊಡಗಿನಲ್ಲಿ ಅಸ್ಸಾಂ ಕಾರ್ಮಿಕರಿಂದ ಆಟೋ ಚಾಲಕನ ಮೇಲೆ ಹಲ್ಲೆ: ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ… ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ… ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ…

ಇತ್ತೀಚಿನ ಸುದ್ದಿ

Bangaluru | ರಾಜ್ಯ ಸರಕಾರಕ್ಕೆ ಕೆಎಸ್ ಡಿಎಲ್ ರಿಂದ 135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ: ಸಿಎಂ ಸ್ವೀಕಾರ

24/10/2025, 15:34

ಬೆಂಗಳೂರು(reporterkarnataka.com): ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿತು.
ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮತ್ತು ಕೆ.ಎಸ್.ಡಿ.ಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. ಈ ಕಾರ್ಯಕ್ರಮವು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.
ಸಚಿವ ಎಂ.ಬಿ.ಪಾಟೀಲ್ ಅವರು ಮಾತನಾಡಿ, ಕೆ.ಎಸ್.ಡಿ.ಎಲ್ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ ರೂ 1,700 ಕೋಟಿ ವಹಿವಾಟು ನಡೆಸಿ, 451 ಕೋಟಿ ಲಾಭವನ್ನು ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರಕಾರಕ್ಕೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ ಎಂದಿದ್ದಾರೆ.
2022-23ರಲ್ಲಿ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ವತಿಯಿಂದ ಸರಕಾರಕ್ಕೆ ರೂ 54 ಕೋಟಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು. 2023-24ರಲ್ಲಿ ರೂ 108 ಕೋಟಿ ಲಾಭಾಂಶ ಹಸ್ತಾಂತರಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭಾಂಶದಲ್ಲಿ ಈಗ ರೂ 27 ಕೋಟಿ ಹೆಚ್ಚಳವಾಗಿದೆ. ಮುಂಬರುವ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ.ಸುಧಾಕರ, ಸಂತೋಷ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪಿ.ಕೆ.ಪ್ರಶಾಂತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು