11:50 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Bangaluru | ರಾಜ್ಯ ಸರಕಾರಕ್ಕೆ ಕೆಎಸ್ ಡಿಎಲ್ ರಿಂದ 135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ: ಸಿಎಂ ಸ್ವೀಕಾರ

24/10/2025, 15:34

ಬೆಂಗಳೂರು(reporterkarnataka.com): ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿತು.
ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮತ್ತು ಕೆ.ಎಸ್.ಡಿ.ಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. ಈ ಕಾರ್ಯಕ್ರಮವು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.
ಸಚಿವ ಎಂ.ಬಿ.ಪಾಟೀಲ್ ಅವರು ಮಾತನಾಡಿ, ಕೆ.ಎಸ್.ಡಿ.ಎಲ್ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ ರೂ 1,700 ಕೋಟಿ ವಹಿವಾಟು ನಡೆಸಿ, 451 ಕೋಟಿ ಲಾಭವನ್ನು ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರಕಾರಕ್ಕೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ ಎಂದಿದ್ದಾರೆ.
2022-23ರಲ್ಲಿ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ವತಿಯಿಂದ ಸರಕಾರಕ್ಕೆ ರೂ 54 ಕೋಟಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು. 2023-24ರಲ್ಲಿ ರೂ 108 ಕೋಟಿ ಲಾಭಾಂಶ ಹಸ್ತಾಂತರಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭಾಂಶದಲ್ಲಿ ಈಗ ರೂ 27 ಕೋಟಿ ಹೆಚ್ಚಳವಾಗಿದೆ. ಮುಂಬರುವ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ.ಸುಧಾಕರ, ಸಂತೋಷ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪಿ.ಕೆ.ಪ್ರಶಾಂತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು