6:24 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Bangaluru | ಋತುಚಕ್ರ ರಜೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಗೆ ಮಹಿಳಾ ನೌಕರರ ಸಂಘ ಸನ್ಮಾನ

28/10/2025, 18:54

ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ವಾರ್ಷಿಕ 12 ಋತುಚಕ್ರ ರಜೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು.


ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಸಂಘದ ಅಧ್ಯಕ್ಷರಾದ ರೋಷಿನಿಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಶಶಿಕಲಾ, ಈ ನಿರ್ಧಾರಕ್ಕಾಗಿ ಧನ್ಯವಾದ ಅರ್ಪಿಸಿದರು.
ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಇಂತಹ ತೀರ್ಮಾನ ಕೈಗೊಂಡಿರುವ ಮೊದಲ ರಾಜ್ಯವಾಗಿದ್ದು, ಇದಕ್ಕಾಗಿ ರಾಜ್ಯದ ಸಮಸ್ತ ಮಹಿಳೆಯರ ಪರವಾಗಿ ಧನ್ಯವಾದಗಳು ಎಂದರು. ಅಲ್ಲದೆ, ಮುಂದಿನ ದಿನಗಳಲ್ಲಿ ಋತುಚಕ್ರ ರಜೆ ನೀತಿಯನ್ನು ಕಾಯ್ದೆಯನ್ನಾಗಿ ಜಾರಿಗೊಳಿಸಬೇಕು ಎಂದು ಮನವಿ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು