10:01 PM Tuesday30 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ಬಾಂಗ್ಲಾ ದೇಶದ ಪ್ರಥಮ ಮಹಿಳಾ ಪ್ರಧಾನಿ ಖಲೀದಾ ಜಿಯಾ ನಿಧನ

30/12/2025, 21:56

ಢಾಕಾ(reporterkarnataka.com): ಬಾಂಗ್ಲಾ ದೇಶದ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಹಾಗೂ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ (80) ಅವರು ಇಂದು ಮುಂಜಾನೆ ನಿಧನರಾದರು.
ಢಾಕಾದ ಅಪೋಲೋ ಆಸ್ಪತ್ರೆಯಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳಿಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಮಂಗಳವಾರ ಬೆಳಿಗ್ಗೆ 6 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.
ಕಳೆದ 36 ದಿನಗಳಿಂದ ಅವರು ಜೀವನ್ಮರಣ ಹೋರಾಟ ನಡೆಸುತ್ತಿದ್ದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ನವೆಂಬರ್ 23 ರಂದು ಹೃದಯ ಮತ್ತು ಶ್ವಾಸಕೋಶದ ಸೋಂಕಿನಿಂದಾಗಿ ಖಲೀದಾ ಜಿಯಾ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರು ದೀರ್ಘಕಾಲದಿಂದ ಯಕೃತ್ತಿನ ಸಿರೋಸಿಸ್, ಸಂಧಿವಾತ, ಮಧುಮೇಹ ಸೇರಿದಂತೆ ಮೂತ್ರಪಿಂಡ ಮತ್ತು ಕಣ್ಣಿನ ಸಮಸ್ಯೆಗಳಿಂದ ಬಳಲುತ್ತಿದ್ದರು. ಬಾಂಗ್ಲಾದೇಶ ಮಾತ್ರವಲ್ಲದೆ ಯುಕೆ, ಯುಎಸ್, ಚೀನಾ ಮತ್ತು ಆಸ್ಟ್ರೇಲಿಯಾದ ತಜ್ಞ ವೈದ್ಯರ ತಂಡ ಇವರಿಗೆ ಚಿಕಿತ್ಸೆ ನೀಡುತ್ತಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕ ತ್ಯಜಿಸಿದ್ದಾರೆ.
ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಖಲೀದಾ ಜಿಯಾ, ದೇಶದ ರಾಜಕೀಯದಲ್ಲಿ ಅಳಿಸಲಾಗದ ಛಾಪು ಮೂಡಿಸಿದವರು. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ಮುನ್ನಡೆಸಿ, ಭರ್ಜರಿ ಜಯದೊಂದಿಗೆ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಅವರ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರು ಅಪಾರ ಭರವಸೆ ಹೊಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು