2:10 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಂಗ್ರಕೂಳೂರು: 55 ಲಕ್ಷ ರೂ.ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

08/12/2024, 20:08

ಸುರತ್ಕಲ್ (reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಂಗ್ರಕೂಳೂರು ಶ್ರೀ ಕೋರ್ದಬ್ಬು ದೈವಸ್ಥಾನ ರಸ್ತೆಯನ್ನು 55 ಲಕ್ಷ ರೂ.ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿ ಮಾಡಲು ಯೋಜನೆ ರೂಪಿಸಲಾಗಿದ್ದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ನಿಧಿಯಿಂದ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಹಾಲಿ ಮೇಯರ್ ಮನೋಜ್ ಕುಮಾರ್ ಅವರು ಅನುದಾನ ಬಿಡುಗಡೆಗೆ ಸಹಕರಿಸಿದ್ದಾರೆ.
ಸ್ಥಳೀಯರ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗುತ್ತಿದೆ. ಸ್ಥಳೀಯವಾಗಿ ಪಾಲಿಕೆಯ ನಿಧಿಯಿಂದಲೇ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು.
ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯ ಕಿರಣ್ ಕುಮಾರ್ ಕೋಡಿಕಲ್ ಅವರು ಪ್ರಾಸ್ತಾವಿಸಿ, ಮಳೆಗಾಲ ಸಹಿತ ಇಲ್ಲಿನ ರಸ್ತೆ ಕೆಸರಿನಿಂದ ಕೂಡಿದ್ದು ದೈವಸ್ಥಾನ, ಬಡಾವಣೆಯಿರುವ ಸ್ಥಳವಾಗಿದೆ. ಶಾಸಕರಲ್ಲಿ ಮನವಿ ಮಾಡಿದ ಮೇರೆಗೆ ಪಾಲಿಕೆಯಲ್ಲಿ ಅನುದಾನ ಮೀಸಲಿರಿಸಿ ಇದೀಗ ಕಾಮಗಾರಿ ಆರಂಭಗೊಂಡಿದೆ ಎಂದರು.
ಮೇಯರ್ ಮನೋಜ್ ಕುಮಾರ್ ಕೋಡಿಕಲ್, ನಿಕಟಪೂರ್ವ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು,ಪ್ರಮುಖರಾದ ಉಮೇಶ್‍ಮಲರಾಯನ ಸಾನ, ನವನೀತ್ ಕೋಟ್ಯಾನ್,ಲತೀಶ್, ಕೋರ್ದಬ್ಬು ದೈವಸ್ಥಾನದ ಪ್ರಮುಖರು , ಗುತ್ತಿಗೆದಾರ ಕೆ.ಸಿ ,ಬಡವಾಣೆ ನಿವಾಸಿಗಳು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು