5:27 AM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬ್ಯಾಂಕ್ ಸೇವಾ ಅವಧಿ ಬೆಳಗ್ಗೆ 8ರಿಂದ 11ರ ವರೆಗೆ ಜಾರಿಗೊಳಿಸುವಂತೆ ಶಾಸಕ ವೇದವ್ಯಾಸ ಕಾಮತ್ ಮನವಿ

29/05/2021, 07:55

ಮಂಗಳೂರು(reporterkarnataka news): ಕೋವಿಡ್ 2ನೇ ಅಲೆಯನ್ನು ತಡೆಗಟ್ಟಲು ರಾಜ್ಯ ಸರಕಾರ ಜಾರಿಗೊಳಿಸಿರುವ ಲಾಕ್ ಡೌನ್ ಸಂದರ್ಭದಲ್ಲಿ ಬ್ಯಾಂಕ್ ಗ್ರಾಹಕ ವ್ಯವಹಾರದ ಸಮಯವನ್ನು ಬೆಳಗ್ಗೆ 8 ಗಂಟೆಯಿಂದ ಬೆಳಗ್ಗೆ 11 ಗಂಟೆ ವರೆಗೆ ನೀಡುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ. 

ಈ ಹಿಂದೆ ಬ್ಯಾಂಕ್ ಗ್ರಾಹಕ ವ್ಯವಹಾರದ ಅವಧಿಯನ್ನು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ನೀಡಲಾಗಿತ್ತು. ಆದರೆ ಲಾಕ್ ಡೌನ್ ಸಂದರ್ಭದಲ್ಲಿ ಬ್ಯಾಂಕ್ ವ್ಯವಹಾರಕ್ಕೆ ಬೆಳಗ್ಗೆ 8 ಗಂಟೆಯಿಂದ 11 ಗಂಟೆಯ ವರೆಗೆ ಸಮಯಾವಕಾಶ ನೀಡುವುದರಿಂದ ಸಾರ್ವಜನಿಕರಿಗೆ ಓಡಾಟಕ್ಕೆ ಬಹಳಷ್ಟು ಅನುಕೂಲವಾಗಲಿದೆ‌. ಲಾಕ್ ಡೌನ್ ಸಡಿಲಿಕೆಯ ಅವಧಿಯಲ್ಲಿ ಯಾವುದೇ ಸಮಸ್ಯೆಯಿಲ್ಲದೆ ಓಡಾಡಬಹುದು. ಮಾತ್ರವಲ್ಲ ಬ್ಯಾಂಕ್ ನೌಕರರಿಗೂ ಇದರಿಂದ ಬೇಗನೆ ಕೆಲಸ ಕಾರ್ಯಗಳನ್ನು ಮುಗಿಸಿ ಮನೆ ಸೇರುವಲ್ಲಿ ಸಹಕಾರಿಯಾಗಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು