10:08 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಬಣಕಲ್ ಸುತ್ತಮುತ್ತ ಧಾರಾಕಾರ ಮಳೆ: ಮನೆಯ ಮೇಲೆ ಬಾಗಿದ ವಿದ್ಯುತ್ ಕಂಬ

30/03/2022, 23:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಬಣಕಲ್, ಕೊಟ್ಟಿಗೆಹಾರ ಸುತ್ತಮುತ್ತ ಬುಧವಾರ ಧಾರಾಕಾರ ಮಳೆಯಾಗಿದ್ದು ಬಣಕಲ್‍ನಲ್ಲಿ ಹೆದ್ದಾರಿ ಬದಿಯಲ್ಲಿ ಹಾಕಿದ ವಿದ್ಯುತ್ ಕಂಬ ಮನೆಯೊಂದರ ಮೇಲೆ ಬಾಗಿ ಬೀಳುವ ಸ್ಥಿತಿಯಲ್ಲಿದೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನಲೆಯಲ್ಲಿ ಬಣಕಲ್ ಭಾಗದಲ್ಲಿ ರಸ್ತೆ ಬದಿಯಲ್ಲಿ ಹೊಸದಾಗಿ ವಿದ್ಯುತ್ ಕಂಬಗಳನ್ನು ಹಾಕಲಾಗಿದ್ದು ಅವೈಜ್ಞಾನಿಕವಾಗಿ ವಿದ್ಯುತ್ ಕಂಬ ಅಳವಡಿಸಿರುವುದರಿಂದ ಕಂಬವೊಂದು ರಸ್ತೆ ಬದಿಯ ಪೌಲ್ಸನ್ ಎಂಬುವವರ ಮನೆಯ ಮೇಲೆ ಬಾಗಿ ನಿಂತು ಅಪಾಯ ಆಹ್ವಾನಿಸುವಂತಿದೆ.

 ಈ ಭಾಗದಲ್ಲಿ ಮಳೆ ಹೆಚ್ಚು ಬೀಳುವುದರಿಂದ ಮಣ್ಣು ಸಡಿಲಗೊಂಡು ವಿದ್ಯುತ್ ಕಂಬಗಳು ಧರೆಗುರುಳುವ ಸಾಧ್ಯತೆಗಳು ಹೆಚ್ಚಿದ್ದು ವಿದ್ಯುತ್ ಕಂಬವನ್ನು ಅಳವಡಿಸುವಾಗ ಕಂಬದ ಕೆಳಭಾಗದಲ್ಲಿ ಸುತ್ತ ಕಾಂಕ್ರೇಟ್ ಹಾಕಿ ಕಂಬ ಅಳವಡಿಸಿದರೇ ಕಂಬ ಧರೆಗುರುಳುವುದು ತಪ್ಪುತ್ತದೆ. ಕೆಲ ಕಡೆಗಳಲ್ಲಿ ರಸ್ತೆ ಪಕ್ಕದ ದಿಬ್ಬದ ಮೇಲೆ ಕಂಬಗಳನ್ನು ಹಾಕಲಾಗಿದ್ದುಯ ತಗ್ಗಿನಲ್ಲಿರುವ ಮನೆ, ತೋಟಗಳ ಮೇಲೆ ಕಂಬ ಉರುಳುವ ಸಾಧ್ಯತೆ ಇರುವುದರಿಂದ ಹೆದ್ದಾರಿ ಬದಿಯಲ್ಲಿ ಹಾಕಿರುವ ಕಂಬಗಳನ್ನು ವೈಜ್ಞಾನಿಕವಾಗಿ ಅಳವಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.


ಕೊಟ್ಟಿಗೆಹಾರ, ಬಣಕಲ್, ಚಾರ್ಮಾಡಿ ಘಾಟ್, ಬಾಳೂರು ಸೇರಿದಂತೆ ಹಲವು ಕಡೆ ಒಂದು ಗಂಟೆಗೂ ಹೆಚ್ಚು  ಕಾಲ ಮಳೆ ಸುರಿಯಿತು. ಬೇಸಿಗೆಯ ತಾಪ ಜೋರಾಗಿದ್ದು ಮಳೆಯಿಂದ ತಂಪಿನ ವಾತಾವರಣ ಕಂಡು ಬಂತು. ಕಾಫಿ,ಕಾಳು ಮೆಣಸು, ಮತ್ತಿತರ ವಾಣಿಜ್ಯ ಬೆಳೆಗಳಿಗೆ ಮಳೆಯಿಂದ ಅನುಕೂಲವಾಗಿದ್ದು ರೈತರು ಮಳೆಯಿಲ್ಲದೇ ಕಂಗಾಲಾಗಿ ಬೆಳೆಗೆ ನೀರಾಯಿಸಲು ಪರದಾಡಿ ಸ್ಪ್ರಿಂಕ್ಲರ್ ಮೊರೆ ಹೋಗಿದ್ದರು. ಬುಧವಾರ ಸುರಿದ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿತು. 

ಇತ್ತೀಚಿನ ಸುದ್ದಿ

ಜಾಹೀರಾತು