ಇತ್ತೀಚಿನ ಸುದ್ದಿ
ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್ ಒಡೆಯರ್ ಪ್ರಸ್ತಾಪ
30/07/2025, 23:39

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆಯಾಗಿರುವ ಪ್ರಕರಣದ ಕುರಿತು ಸಂಸದ ಯದುವೀರ್ ಚಾಮರಾಜ ದತ್ತ ಒಡೆಯರ್ ಅವರು ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪಿಸಿˌ ಕೇಂದ್ರ ಗೃಹ ಸಚಿವಾಲಯವು ತಕ್ಷಣವೇ ಪ್ರಕರಣದಲ್ಲಿ ಮಧ್ಯಸ್ತಿಕೆ ವಹಿಸಿ ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.
ಈ ಸಮಾಜ ದ್ರೋಹಿ ಚಟುವಟಿಕೆಗೆ ಕಾರಣರಾದವರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲು ಅವರು ಮನವಿ ಮಾಡಿದರು.