1:22 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಬಾನೊಟ್ಟು ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ಅಖಂಡ ಏಕಾಹ ಭಜನಾ ಕಾರ್ಯಕ್ರಮ ಸಂಪನ್ನ

11/04/2023, 20:08

ಮಾಣಿ(reporterkarnataka.com): ಬಾನೊಟ್ಟು ಶ್ರೀ ಉಮಾಮಹೇಶ್ವರ ಸಾನ್ನಿದ್ಯ ದ ಜೀರ್ಣೋದ್ಧಾರ ಕುರಿತು ಧರ್ಮಜಾಗೃತಿ ಅಭಿಯಾನದ ಅಂಗವಾಗಿ ಅಖಂಡ- ಏಕಾಹ ಭಜನಾ ಕಾರ್ಯಕ್ರಮ ಎಪ್ರಿಲ್ 8 ನೇ ಸೂರ್ಯೋದಯದಿಂದ ಎಪ್ರಿಲ್ 9ರ ಸೂರ್ಯೋದಯದವರೆಗೆ ಊರ-ಪರವೂರ ವಿವಿಧ ಭಜನಾ ತಂಡಗಳ ಸಮ್ಮಿಲನ ದಲ್ಲಿ ಅದ್ದೂರಿಯಾಗಿ ಜರುಗಿತು.
ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿಯವರು ದೀಪ ಪ್ರಜ್ವಲನಗೊಳಿಸುವ ಮೂಲಕ ಈ ಅಖಂಡ ಏಕಾಹ ಭಜನಾ ಕಾರ್ಯಕ್ರಮಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣ ರೈ ಪೆರ್ಲಬೀಡು, ಪ್ರಮುಖರಾದ ಎನ್ .ರವಿಶರ್ಮ, ಸದಾಶಿವ ಆಚಾರ್ಯ, ವೈದಿಕರಾದ ಪಳನೀರು ಅನಂತ ಭಟ್ ಗೂ ಕ್ಷೇತ್ರ ಅಭಿವೃದ್ಧಿ ಸಮಿತಿಯ ಸದಸ್ಯರು, ಮಹಿಳಾ ಸಮಿತಿ ಸದಸ್ಯರು, ಗ್ರಾಮಸ್ತರು ಹಾಗೂ ಊರ – ಪರವೂರಿನ ಭಕ್ತರು ಉಪಸ್ಥಿತರಿದ್ದರು.
ದೇವಾಲಯ ಜೀರ್ಣೋದ್ಧಾರ ಕುರಿತಾಗಿ ಜರುಗಿದ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಪರಿಹಾರ ಹಾಗೂ ನಿವೃತ್ತಿಯ ಭಾಗವಾಗಿ ಗ್ರಾಮದ ಸುಬೀಕ್ಷೇಗಾಗಿ ಕ್ಷೇತ್ರ ಅಭಿವೃದ್ಧಿ ಸಮಿತಿ ಅಖಂಡ ಏಕಾಹ ಭಜನೆ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮ ಆಯೋಜಿಸಿದ್ದು 20ಕ್ಕೂ ಹೆಚ್ಚು ವಿವಿಧ ಭಜನಾ ತಂಡಗಳು ಭಾಗವಹಿಸಿದ್ದವು. ಶ್ರೀ ಗುರುದೇವದತ್ತ ಸಂಸ್ಥಾನ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಈ ಕಾರ್ಯಕ್ರಮ ಕ್ಕೆ ಚಿತೈಸಿ ಶುಭಹಾರೈಸಿದರು.


ಕಾರ್ಯಕ್ರಮದಲ್ಲಿ ನೂಜಿಬೈಲು ರಮೇಶ್ ಭಟ್, ವೇದ ವಿದ್ವಾಂಸರಾದ ವೇ| ಮೂ| ಪಳ್ಳತ್ತಡ್ಕ ಘನಪಾಠಿ ಶಂಕರನಾರಾಯಣ ಭಟ್, ರಾಕೋಡಿ ಈಶ್ವರ ಭಟ್,ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಸೇರಿದಂತೆ ಹಲವು ಮಂದಿ ಪ್ರಮುಖರು ಪಾಲ್ಗೊಂಡಿದ್ದರು.
ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಯವರು ಹಾಗೂ ರಾಜರಾಜೇಶ್ವರಿ ಭಜನಾ ಮಂಡಳಿಯ ಸದಸ್ಯರಿಂದ ಶುಭಾರಂಭಗೊಂಡ ಬಾನೊಟ್ಟು ಅಖಂಡ ಏಕಾಹ ಭಜನೆ ನೇರಳಕಟ್ಟೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸದಸ್ಯ ರ ಭಜನೆಯ ಮೂಲಕ ಮಂಗಳಾಚರಣೆ ಕಾಣುವ ಮೂಲಕ ಬಾನೊಟ್ಟು ಅಖಂಡ ಏಕಾಹ ಭಜನೆ ಸಂಪನ್ನ ಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು