1:07 AM Monday17 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಭರ್ಜರಿ ರೋಡ್ ಶೋ: ಭಾರೀ ಜನಸ್ತೋಮದ ನಡುವೆ ನಾಮಪತ್ರ ಸಲ್ಲಿಕೆ

20/04/2023, 17:36

ಬಂಟ್ವಾಳ(reporterkarnataka.com): ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಅವರು ಗುರುವಾರ ಭರ್ಜರಿ ರೋಡ್ ಶೋ ಮೂಲಕ ಆಗಮಿಸಿ
ನಾಮಪತ್ರ ಸಲ್ಲಿಸಿದರು.
ಅಪಾರ ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಪಕ್ಷದ ಮುಖಂಡರ ಜತೆ ಬಂಟ್ವಾಳ ಮಿನಿ ವಿಧಾನಸೌಧ
ಕಚೇರಿಯಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದರು.
ಗುರುವಾರ ಬೆಳಿಗ್ಗೆ 9 ಗಂಟೆಗೆ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದ ಬಳಿಯಿಂದ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಹೊರಟು, ಮಧ್ಯಾಹ್ನ 12:35ಕ್ಕೆ ಮಿನಿವಿಧಾನಸೌಧದಲ್ಲಿ ರಮಾನಾಥ ರೈ ನಾಮಪತ್ರ ಸಲ್ಲಿಸಿದರು. ಇದಕ್ಕೆ ಮುನ್ನ ಶ್ರೀಕ್ಷೇತ್ರ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೂ ಭೇಟಿ ನೀಡಿ ಅಮ್ಮನವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು
ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಕೆ.ಪಿ.ಸಿ.ಸಿ. ಸದಸ್ಯರುಗಳಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪ್ರಮುಖರಾದ ಪದ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು