11:49 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಬಂಟ್ವಾಳ: ಕಾಂಗ್ರೆಸ್ ಹಿರಿಯ ನಾಯಕ ಜನಾರ್ಧನ ಪೂಜಾರಿ ಭೇಟಿಯಾಗಿ ಆಶೀರ್ವಾದ ಪಡೆದ ರಮಾನಾಥ ರೈ

19/04/2023, 21:12

ಬಂಟ್ವಾಳ(reporterkarnataka.com):
ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹಿರಿಯ ನಾಯಕನ ಆರೋಗ್ಯ, ಯೋಗಕ್ಷೇಮದ ಬಗ್ಗೆ ವಿಚಾರಿಸಿದರು.
ಗುರುವಾರ ಬೆಳಿಗ್ಗೆ 9 ಗಂಟೆಗೆ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದ ಬಳಿಯಿಂದ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಹೊರಟು, ಮಧ್ಯಾಹ್ನ 12:35ಕ್ಕೆ ಮಿನಿವಿಧಾನಸೌಧದಲ್ಲಿ ರಮಾನಾಥ ರೈ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ಜನಾರ್ಧನ ಪೂಜಾರಿ ಅವರ ಬಂಟ್ವಾಳದ ನಿವಾಸಕ್ಕೆ ಭೇಟಿ ನೀಡಿ ಅವರು ಮಾತುಕತೆ ನಡೆಸಿದರು.
ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಇಂತಹ ವಿಷಯಗಳ ಬಗ್ಗೆ ಬಲವಾಗಿ ಮಾತನಾಡುವವರು ಯಾರೂ ಇಲ್ಲ. ಅದಕ್ಕೋಸ್ಕರವಾದರೂ ರಮಾನಾಥ ರೈ ಗೆದ್ದು ಬರಬೇಕು ಎಂದು ಜನಾರ್ಧನ ಪೂಜಾರಿ ಈ ಸಂದರ್ಭ ಅಭಿಪ್ರಾಯಪಟ್ಟರು. ಅಲ್ಲದೆ, ಈ ಚುನಾವಣೆಯಲ್ಲಿ ರಮಾನಾಥ ರೈ ಮತ್ತೊಮ್ಮೆ ಗೆದ್ದುಬರಲಿ ಎಂದು ಹಾರೈಸಿದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಕೆಪಸಿಸಿ ಸದಸ್ಯರುಗಳಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪ್ರಮುಖರಾದ ಪದ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯಾನ್ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು