2:57 PM Wednesday29 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಬಂಟ್ವಾಳ | ಅಮ್ಮುಂಜೆ ವೃದ್ದೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

29/07/2026, 14:51

ಬಂಟ್ವಾಳ(reporterkarnataka.com): ಅಮ್ಮುಂಜೆ ನಿವಾಸಿಯಾದ ವೃದ್ದೆಯೊಬ್ಬರ ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಅಮ್ಮುಂಜೆ ನಿವಾಸಿಯಾದ ವೃದ್ದೆ ಬೆನಡಿಕ್ಟ್ ಕಾರ್ಲೋ (73) ಎಂಬವರ ಆರೈಕೆ ನೋಡಿಕೊಳ್ಳುತ್ತಿದ್ದ ಆರೋಪಿತೆ ಬಂಟ್ವಾಳ ಅಮ್ಟಾಡಿ ನಿವಾಸಿ ಏಲ್ಮಾ ಪ್ರೆಶ್ಚಿತ್ ಬರೆಟ್ರೋ (23)ಎಂಬಾಕೆಯು, ವೃಧ್ದೆಯ ಬಳಿಯಿದ್ದ ಚಿನ್ನಾಭರಣಗಳನ್ನು ಸುಲಿಗೆ ಮಾಡುವ ಉದ್ದೇಶದಿಂದ,ತನ್ನ ಸ್ನೇಹಿತ ಬಂಟ್ವಾಳ ನರಿಕೊಂಬು ನಿವಾಸಿ ಸತೀಶ ನಾಯಕ್ (28) ಎಂಬಾತನ ಸಹಾಯದಿಂದ ವೃದ್ದೆ ಸೇವಿಸುವ ಆಹಾರದಲ್ಲಿ ವಿಷ ಬೆರೆಸಿ ಕೊಲ್ಲಲು ಯತ್ನಿಸಿ, ಅದರಲ್ಲಿ ಸಫಲರಾಗದಿದ್ದಾಗ ಮತ್ತೋರ್ವ ಆರೋಪಿ ಬಂಟ್ವಾಳ ನರಿಕೊಂಬು ನಿವಾಸಿ ಚರಣ್ ಕುಮಾರ್ (31) ಎಂಬಾತನ ಸಹಾಯದಿಂದ 2021, ಜನವರಿ 25ರಂದು ರಾತ್ರಿ, ಬೆನಡಿಕ್ಟ್ ಕಾರ್ಲೋ ಅವರನ್ನು ಉಸಿರುಗಟ್ಟಿಸಿ ಕೊಲೆಗೈದು ಒಟ್ಟು 61.070 ಗ್ರಾಂ ತೂಕದ (ಅಂದಿನ ರೂ.3 ಲಕ್ಷ ಮೌಲ್ಯ) ಚಿನ್ನಾಭರಣಗಳನ್ನು ಸುಲಿಗೆ ಮಾಡಿ, ಸಾಕ್ಷಿ ನಾಶಪಡಿಸಿದ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ22/2021, ಕಲಂ: 302, 392, 120 (ಬಿ), 201 ಜೊತೆಗೆ 34 ಐಪಿಸಿ ರಂತೆ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದಲ್ಲಿ ಆಗಿನ ಬಂಟ್ವಾಳ ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಪ್ರಸನ್ನ ಎಮ್.ಎಸ್ ರವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆಗಿನ ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕರಾದ ಟಿ.ಡಿ. ನಾಗರಾಜ್ ರವರು ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ, ಮೂವರು ಆರೋಪಿಗಳ ವಿರುದ್ಧ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಮಂಗಳೂರಿನಲ್ಲಿ ಪ್ರಕರಣದ ವಿಚಾರಣೆ ನಡೆದು 2026, ಜುಲೈ 28ರಂದು ನ್ಯಾಯಾಧೀಶರಾದ ಶ್ರೀ ಜಗದೀಶ್‌ ವಿ.ಎನ್. ರವರು ಪ್ರಕರಣದ ಮೂವರೂ ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿರುತ್ತಾರೆ.
ಸರಕಾರಿ ಅಭಿಯೋಜಕರಾದ ಜ್ಯೋತಿ ಪ್ರಮೋದ್‌ ನಾಯಕ್‌ ಅವರು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ‌ ಮಂಡನೆ ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು