9:24 AM Monday17 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಬಂಟ್ವಾಳ: ಏ. 20ರಂದು ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ನಾಮಪತ್ರ ಸಲ್ಲಿಕೆ: ವೆಂಕಟರಮಣ ದೇಗುಲದಿಂದ ಪಾದಯಾತ್ರೆ

16/04/2023, 18:57

ಬಂಟ್ವಾಳ(reporterkarnataka.com):
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರು ಏಪ್ರಿಲ್ 20ರಂದ ನಾಮಪತ್ರ ಸಲ್ಲಿಸಲಿದ್ದಾರೆ. ಬಿ.ಸಿ.ರೋಡ್ ನಲ್ಲಿರುವ ರಮಾನಾಥ ರೈ ಅವರ ಚುನಾವಣಾ ಪ್ರಚಾರ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.
ಕಾಂಗ್ರೆಸ್ ಯಾವತ್ತೂ ಸುಳ್ಳುಹೇಳುವುದಿಲ್ಲ, ಕೊಟ್ಟ ಭರವಸೆಗಳನ್ನು ಈಡೇರಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದಲ್ಲಿ ಬಡವರಿಗೆ ಏಳು ಕೆಜಿ ಅಕ್ಕಿ ನಿರಂತರವಾಗಿ ನೀಡಿಕೊಂಡು ಬಂದಿದ್ದೇವೆ. ರೈತರಿಗೆ ಕೃಷಿಗೆ ಉಚಿತ ವಿದ್ಯುತ್ ಈಗಾಗಲೇ ಕೊಟ್ಟಿದ್ದೇವೆ. ಈ ಬಾರಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬಂದು ಈಗಾಗಲೇ ಪ್ರಕಟಿಸಿರುವ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದು ನಿಶ್ಚಿತ ಎಂದು ಈ ವೇಳೆ ಮಾತನಾಡಿದ ರಮಾನಾಥ ರೈ ಭರವಸೆ ನೀಡಿದರು.
ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಿಂದ ಪಾದಯಾತ್ರೆಯ ಮೂಲಕ ಬಿ.ಸಿ.ರೋಡ್ ಮಿನಿ ವಿಧಾನಸೌಧದಲ್ಲಿರುವ ಚುನಾವಣಾ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪಕ್ಷದ ಪ್ರಮುಖರುಗಳಾದ ಪಿಯೂಸ್ ರಾಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಪದ್ಮನಾಭ ರೈ, ಅಬ್ಬಾಸ್ ಆಲಿ, ಲುಕ್ಮಾನ್ ಬಂಟ್ವಾಳ, ಜನಾರ್ಧನ ಚೆಂಡ್ತಿಮಾರ್, ಸುರೇಶ್ ಕುಮಾರ್ ನಾವೂರ ಮುಂತಾದವರು ವೇದಿಕೆಯಲ್ಲಿದ್ದರು.
ಇದೇ ವೇಳೆ ಬಿಜೆಪಿ ಕಾರ್ಯಕರ್ತರುಗಳಾದ ಮುರಳೀಧರ ಬಾಂಬಿಲ, ಜನಾರ್ಧನ ಪಚ್ಚಿನಡ್ಕ ಕಳ್ಳಿಗೆ,ಎಸ್ ಡಿಪಿಐಯ ಸಜೀಪಮೂಡ ಗ್ರಾಮ ಸಮಿತಿ ಅಧ್ಯಕ್ಷ ಮಾಲಿಕ್ ಕೊಳಕೆ, ಮೊಹಮ್ಮದ್ ಶಾಖೀರ್, ಸವಾನ್ ಬೋಗೋಡಿ, ಸಫ್ವಾನ್ ಬೋಗೋಡಿ, ಮೊಹಮ್ಮದ್ ಇರ್ಷಾದ್ ಬೋಗೋಡಿ, ತಮೀಜ್ ಬೋಗೋಡಿ, ಮೊಹಮ್ಮದ್ ರಿಝ್ವಾನ್ ಗುಡ್ಡೆಯಂಗಡಿ, ಮೊಹಮ್ಮದ್ ಪಾರೀಸ್ ಮುಂತಾದವರು ತಮ್ಮ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ಮುಖಂಡರು, ಬ್ಲಾಕ್ ಹಾಗೂ ವಲಯ ಮುಖಂಡರುಗಳು ಉಪಸ್ಥಿತರಿದ್ದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು