6:38 PM Sunday14 - December 2025
ಬ್ರೇಕಿಂಗ್ ನ್ಯೂಸ್
ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಇತ್ತೀಚಿನ ಸುದ್ದಿ

ಬಂಟ್ವಾಳ: ಮಾದಕ ವಸ್ತು ಮಾರಾಟಕ್ಕೆ ಯತ್ನ; ಇಬ್ಬರು ಆರೋಪಿಗಳ ಬಂಧನ; 810 ಗ್ರಾಂ ಗಾಂಜಾ ವಶ

14/12/2025, 18:27

ಬಂಟ್ವಾಳ(reporterkarnataka.com): ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು 810 ಗ್ರಾಂ ಗಾಂಜಾ ಸ್ವಾಧೀನಪಡಿಸಿಕೊಂಡಿದ್ದಾರೆ.
ಬಂಟ್ವಾಳದ ತುಂಬೆ ಗ್ರಾಮದ ಹನಮನಗರ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾನುವಾರ ಯಾರೋ ವ್ಯಕ್ತಿಗಳು ಅಕ್ರಮವಾಗಿ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಮಂಜುನಾಥ ಟಿ, (ಪೊಲೀಸ್ ಉಪ ನಿರೀಕ್ಷಕರು (ಕಾ&ಸು) ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ) ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ರಾಷ್ಟ್ರೀಯ ಹೆದ್ದಾರಿಯ ಪಕ್ಕ ನಿರ್ಜನ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು KA-19-MN-3664 ನೇ ನೊಂದಣಿ ಸಂಖ್ಯೆಯ ಕಾರು ಮತ್ತು KA-19-AE-0166 ನೇ ನೊಂದಣಿ ಸಂಖ್ಯೆಯ ಆಟೋ ರಿಕ್ಷಾದ ಬಳಿ ಅನುಮಾನಾಸ್ಪದವಾಗಿ ನಿಂತುಕೊಂಡಿದ್ದು, ಅವರುಗಳನ್ನು ಹಿಡಿದು ವಿಚಾರಿಸಿದಾಗ ಒಬ್ಬಾತ ಬಂಟ್ವಾಳ ತುಂಬೆ ನಿವಾಸಿ ಸಮೀರ್ (31) ಮತ್ತು ಮತ್ತೋರ್ವ ಬಂಟ್ವಾಳ ಗೂಡಿನ ಬಳಿ ನಿವಾಸಿ ಮೊಹಮ್ಮದ್ ಅಸೀಫ್ (35) ಎಂಬುದಾಗಿ ತಿಳಿಸಿರುತ್ತಾರೆ. ವಿಚಾರಣೆಯ ವೇಳೆ ತಾವುಗಳು ಅಧಿಕ ಹಣಗಳಿಸುವ ಉದ್ದೇಶದಿಂದ ನಿಷೇಧಿತ ಮಾದಕವಸ್ತುವಾದ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವುದಾಗಿ ಒಪ್ಪಿಕೊಂಡಿದ್ದು, ತಪಾಸಣೆ ನಡೆಸಿದಾಗ ಕಾರಿನಲ್ಲಿ 450 ಗ್ರಾಂ. ಗಾಂಜಾ ಹಾಗೂ ರಿಕ್ಷಾದಲ್ಲಿ 360 ಗ್ರಾಂ ಗಾಂಜಾ ಪತ್ತೆಯಾಗಿರುತ್ತದೆ.
ವಾಹನ ಹಾಗೂ 810 ಗ್ರಾಂ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸ್ವಾಧೀನಪಡಿಸಲಾಗಿದ್ದು, ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ ಕ್ರ : 183/2025 ಕಲಂ: 8(C), 20(B) ii (a) NDPS Act ಅಡಿಯಲ್ಲಿ ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು