1:55 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಬಂಟ್ವಾಳ : ಕಾರ್ಮೆಲ್ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘ ವಾರ್ಷಿಕ ಸಭೆ

10/12/2022, 22:27

ಬಂಟ್ವಾಳ(reporterkarnataka.com):
ಕಾರ್ಮೆಲ್ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಸಭೆ
ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಕಾರ್ಮೆಲ್ ಕಾಲೇಜಿನ ಪ್ರಾಂಶುಪಾಲೆ, ಸಿಸ್ಟರ್ ಡಾ. ಲತಾ ಫರ್ನಾಂಡಿಸ್ ಎ.ಸಿ., ರಕ್ಷಕ ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿಯ ಸಭೆಯನ್ನು ಉದ್ಘಾಟಿಸಿದರು.

ಅವರು ಮಾತನಾಡಿ ಕಾಲೇಜಿನ ಕಾರ್ಯ ಚಟುವಟಿಕೆಗಳ ಬಗ್ಗೆ ಹೆತ್ತವರಿಗೆ ತಿಳಿ ಹೇಳಿದರು.

ಕಾರ್ಮೇಲ್ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ ವಂದನೀಯ ಭಗಿನಿ ರೋಸಿಲ್ಡ್ ಮಾತನಾಡಿ, ಮಾನವನ ವ್ಯಕ್ತಿತ್ವದ ರೂಪ ರೇಖೆಯು ಅವನ ಬಾಲ್ಯದಿಂದಲೇ ಅವನ ಸುತ್ತಮುತ್ತಲಿರುವ ಶಿಕ್ಷಕರ ಪಾಲಕರ ಹಾಗೂ ಸಮಾಜದ ಜನರ ಪ್ರಭಾವದಿಂದ ಆಗಿರುತ್ತದೆ.
ಬರೀ ಶಿಕ್ಷಣ ಸಿಕ್ಕರೆ ಸಾಲದು ಅದರ ಜೊತೆ ಇನ್ನೂ ಅನೇಕ ಅಂಶಗಳನ್ನು ಬಾಲ್ಯದಿಂದಲೇ ರೂಢಿಸಿಕೊಂಡರೆ ಆತ ಯಶಸ್ವಿಯಾಗುತ್ತಾನೆಂಬ ಸಂದೇಶವನ್ನು ನೀಡಿದರು.


ರಕ್ಷಕ ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿ 2020 -21ರ ಸಾಲಿನ ಸದಸ್ಯೆ ಮೋಹಿನಿ ಹಾಗೂ ವಿನ್ಸೆಂಟ್ ಡಿಸೋಜ ಉಪಸ್ಥಿತರಿದ್ದರು.
ಸಭೆಯಲ್ಲಿ ಹೆತ್ತವರು, ವಿದ್ಯಾರ್ಥಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಅದೇ ರೀತಿ ರಕ್ಷಕ ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿ 2022 -23ರ ಸಾಲಿನ ಹೊಸ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ರಾಷ್ಟ್ರಗೀತೆಯೊಂದಿಗೆ ಸಭೆಯನ್ನು ಮುಕ್ತಾಯಗೊಳಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು