10:59 AM Wednesday19 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಚುನಾವಣಾ ಕಚೇರಿಗೆ ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ

23/04/2023, 12:37

ಬಂಟ್ವಾಳ (reporterkarnataka.com): ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರ ಚುನಾವಣಾ ಕಚೇರಿಗೆ ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯ, ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ ನೀಡಿದರು.
ರಮಾನಾಥ ರೈ ಅವರ ಚುನಾವಣಾ ಪ್ರಚಾರ ಕಾರ್ಯ ನಿರ್ವಹಣೆಯ ಕುರಿತು ಈ ವೇಳೆ ಅವರು ಮಾತುಕತೆ ನಡೆಸಿದರು. ಅಲ್ಲದೆ, ರೈ ಅವರ ಚುನಾವಣಾ ಯಶಸ್ಸಿಗೆ ಶುಭಕೋರಿದರು.

ಈ ವೇಳೆ ಕೆ.ಪಿ.ಸಿ.ಸಿ. ಸದಸ್ಯರುಗಳಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಜಿ.ಪಂ. ಸದಸ್ಯ ಪದ್ಮಶೇಖರ್ ಜೈನ್, ಕಾಂಗ್ರೆಸ್ ಚುನಾವಣಾ ಕಚೇರಿ ಉಸ್ತುವಾರಿಗಳಾದ ನಾರಾಯಣ ನಾಯ್ಕ್, ಪರಮೇಶ್ವರ ಮೂಲ್ಯ, ಪ್ರಮುಖರಾದ ಜಗದೀಶ್ ಕೊಯಿಲ, ರಿಯಾಝ್ ಕೆಳಗಿನಪೇಟೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು