10:05 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು…

ಇತ್ತೀಚಿನ ಸುದ್ದಿ

Bantwal | ಶಿಕ್ಷಣದಿಂದ ಪ್ರಜ್ಞಾವಂತ ಸಮಾಜ ನಿರ್ಮಾಣ ಸಾಧ್ಯ: ಒಡಿಯೂರು ಸ್ವಾಮೀಜಿ

25/10/2025, 17:30

ಬಂಟ್ವಾಳ(reporterjarnataka.com): ಸದಾಶಿವ ಶಿಕ್ಷಣ ಪ್ರತಿಷ್ಠಾನ ಇದರ ಅಶ್ರಯದಲ್ಲಿ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆಯಲ್ಲಿ ಶೀಘ್ರದಲ್ಲಿ ಆರಂಭಗೊಳ್ಳಲಿರುವ ನೂತನ ವಿದ್ಯಾಸಂಸ್ಥೆಯ ನಾಮಕರಣ ಹಾಗೂ ಲಾಂಛನ ಬಿಡುಗಡೆ ಸಮಾರಂಭ ಬೆಂಜನಪದವು ಶುಭಲಕ್ಷ್ಮಿ ಸಭಾಂಗಣದಲ್ಲಿ ನಡೆಯಿತು.
ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ನೂತನ ವಿದ್ಯಾ ಸಂಸ್ಥೆಗೆ “ಎಡ್ವೆಂಚರ್” (EDUVENTURE) ಎನ್ನುವ ನಾಮಕರಣದೊಂದಿಗೆ ಸಂಸ್ಥೆಯ ಲಾಂಛನ ಬಿಡುಗಡೆ ಮಾಡಿದರು. ಬಳಿಕ ಆಶೀರ್ವಾಚನ ನೀಡಿ, ಕ್ಷಣ ಕ್ಷಣ ಕಲಿಯುವುದೇ ಶಿಕ್ಷಣ. ಶಿಕ್ಷಣದಿಂದ ಮಾತ್ರ ಪ್ರಜ್ಞಾವಂತ ಸಮಾಜ ನಿರ್ಮಾಣ ಸಾಧ್ಯ. ನೈತಿಕ ಮೌಲ್ಯ ತುಂಬಿದ ಶಿಕ್ಷಣದ ಅನಿವಾರ್ಯತೆಯಾಗಿದೆ. ಬದುಕು ಯಾವಾಗಲೂ ಜೇನಿನಂತಿರಬೇಕು .ಸಾತ್ವಿಕ ಸ್ವಭಾವ, ಅರ್ಪಣಾ ಮನೋಭಾವ,‌ ಕಠಿಣ ಪರಿಶ್ರಮವಿದ್ದರೆ ಯಾವುದೇ ಸಾಧನೆ ಮಾಡಲು ಸಾಧ್ಯ‌ ಎಂದು ಅಮೃತ್ ರೈ ಯವರ ತಂಡ ತೊರಿಸಿಕೊಟ್ಟಿದ್ದಾರೆ. ಸಂಸ್ಥೆಯ ಆಶಯ ಸಾಕಾರವಾಗಲಿ. ನೂತನ ವಿದ್ಯಾಸಂಸ್ಥೆಗೆ ಉತ್ತಮ ಭವಿಷ್ಯವಿರಲಿ ಎಂದು ಶುಭಹಾರೈಸಿದರು.
ಮುಖ್ಯ ಅತಿಥಿ ಮಾಜಿ ಸಚಿವ ಬಿ. ರಮಾನಾಥ ರೈಯವರು ನೂತನ ವಿದ್ಯಾಸಂಸ್ಥೆಯ ವೆಬ್ಸೈಟ್ ಗೆ ಚಾಲನೆ ನೀಡಿದರು. ಸಂಸ್ಥೆಯ ಬ್ರೋಶರ್ ಬಿಡುಗಡೆಗೊಳಿಸಿ ಮಾತನಾಡಿದರು‌. ಹಿಂದೆ ದುರ್ಬಲ ವರ್ಗದ ಜನರು ಶಿಕ್ಷಣದಿಂದ ವಂಚಿತರಾಗಿದ್ದರು. ಈಗ ಶಿಕ್ಷಣ ನಮ್ಮೆಲ್ಲರ ಹಕ್ಕು ಆಗಿದೆ. ನೂತನ ವಿದ್ಯಾ ಸಂಸ್ಥೆ ಎಲ್ಲಾ ಸವಲತ್ತುಗಳನ್ನೊಳಗೊಂಡ, ಸುಂದರ ವಿದ್ಯಾದಾನ ಮಾಡುವ ತಾಣವಾಗಿ ಅತಿ ಎತ್ತರಕ್ಕೆ ಏರಲಿ.ಸುಂದರ ಸುಶಿಕ್ಷಿತ ಸಮಾಜ ನಿರ್ಮಾಣಕ್ಕೆ ಸಂಸ್ಥೆ ಪೂರಕವಾಗಲಿ ಎಂದು ಸಂಸ್ಥೆಯಲ್ಲಿ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ಸಿಗಲಿ ಎಂದರು .
ರಮಾನಾಥ ರೈ ಅವರನ್ನು ಸಂಸ್ಥೆಯ ಪರವಾಗಿ ಗೌರವಿಸಸಲಾಯಿತು.
ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು.
ಸದಾಶಿವ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ನೂತನ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಮೃತ್ ಯು‌ ರೈ ಪ್ರಾಸ್ತಾವಿಕವಾಗಿ ಮಾತನಾಡಿ ನೂತನ ವಿದ್ಯಾ ಸಂಸ್ಥೆ ಅತ್ಯಾಧುನಿಕ ಶಿಕ್ಷಣಕ್ಕೆ ಪೂರಕವಾಗುವಂತಹ ಮತ್ತು ಸರ್ವ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒಂದೇ ಸೂರಿನಡಿ ತರಬೇತಿ ನೀಡುವ ಸೌಲಭ್ಯವಿದೆ ಎಂದು ಹೇಳಿದರು.
ವಿದ್ಯಾಸಂಸ್ಥೆಯ ನೂತನ ಪ್ರಾಂಶುಪಾಲರಾದ ಮಹೇಶ್ ಕೆ. ಎನ್‌. ಪುತ್ತೂರು ಮಾಹಿತಿ ನೀಡಿದರು.
ವೇದಿಕೆಯಲ್ಲಿ ಕಳ್ಳಿಗೆ ಗ್ರಾಪಂ .ಅಧ್ಯಕ್ಷ ಪುರುಷೋತ್ತಮ ಕೊಟ್ಟಾರಿ, ಸದಾಶಿವ ಪ್ರತಿಷ್ಠಾನದ ಕಾರ್ಯದರ್ಶಿ ರಕ್ಷಿತಾ ಅಮೃತ್ ರೈ, ಕೋಶಾಧಿಕಾರಿ ಅಶ್ವಥ್, ಟ್ರಸ್ಟಿ ಬಿ‌. ಮೋಹನ್ ಕುಮಾರ್ ಉಪಸ್ಥಿತರಿದ್ದರು.
ನೂತನ ವಿದ್ಯಾ ಸಂಸ್ಥೆಯ ವಿಶೇಷತೆಯನ್ನೋಳಗೊಂಡ ಸಂಪೂರ್ಣ ಮಾಹಿತಿಯನ್ನು ಎಲ್ ಇ ಡಿ ಪರದೆಯಲ್ಲಿ ಪ್ರದರ್ಶಿಸಲಾಯಿತು
ಸದಾಶಿವ ಪ್ರತಿಷ್ಠಾನದ ಟ್ರಸ್ಟಿ ಸಮತಾ ಕೆ ಜೆ ಸ್ವಾಗತಿಸಿ, ಟ್ರಸ್ಟಿ ದೀಪಿಕಾ ಸಂದೇಶ್ ಧನ್ಯವಾದವಿತ್ತರು, ಸತೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು