2:59 PM Sunday31 - August 2025
ಬ್ರೇಕಿಂಗ್ ನ್ಯೂಸ್
ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ… ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ… Kodagu | ಗೋಣಿಕೊಪ್ಪದಲ್ಲಿ ಅಸ್ಸಾಂ ವ್ಯಕ್ತಿಯಿಂದ ಅಂಗಡಿ ಶಟರ್ ಮುರಿದು 32 ಹೊಸ… ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:…

ಇತ್ತೀಚಿನ ಸುದ್ದಿ

Bantwal | ತುಂಬೆಯ ಕಾವ್ಯಾ ಕೆ. ನಾಯಕ್ ಗೆ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಪಿಎಚ್ ಡಿ ಪದವಿ

13/07/2025, 11:33

ಬಂಟ್ವಾಳ(reporterkarnataka.com): ತುಂಬೆಯ ಕಾವ್ಯಾ ಕೆ. ನಾಯಕ್ ಅವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್ ಕಂಟಿನ್ಯುವಸ್ ಗ್ಲುಕೋಸ್ ಮಾನಿಟರಿಂಗ್ ಸೆನ್ಸೋರ್ಸ್ ಫಾರ್ ಎಫೆಕ್ಟಿವ್ ಮ್ಯಾನೇಜ್ಮೆಂಟ್ ಆಫ್ ಡಯಾಬಿಟಿಸ್” ಎಂಬ ವಿಷದ ಕುರಿತಾಗಿ ಮಂಡಿಸಿದ ಮಹಾಪ್ರಬಂಧಕ್ಕೆ ಭಾರತೀಯ ವಿಜ್ಞಾನ ಸಂಸ್ಥೆ (IISc), ಬೆಂಗಳೂರು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಈ ಮಹತ್ವದ ಸಂಶೋಧನೆ ಡಯಾಬಿಟಿಸ್ ನಿಖರ ನಿರ್ವಹಣೆಗೆ ಸಹಾಯ ಮಾಡುವ ಎಲೆಕ್ಟ್ರೋಕೆಮಿಕಲ್ ತಂತ್ರಜ್ಞಾನಾಧಾರಿತ ನಿರಂತರ ಗ್ಲುಕೋಸ್ ಮಾನಿಟರಿಂಗ್ ಸೆನ್ಸೋರ್ ಅಭಿವೃದ್ಧಿಯ ಬಗ್ಗೆ ಆಳವಾದ ಅಧ್ಯಯನವನ್ನು ಒಳಗೊಂಡಿದೆ.
ಇವರು ತುಂಬೆಯ ರೂಪಾ ಮತ್ತು ಕೆ. ಕೃಷ್ಣ ನಾಯಕ್ ದಂಪತಿಯ ಪುತ್ರಿಯಾಗಿದ್ದು, ಮಂದರ್ಕೆಯ ಗಿರೀಶ್ ಎನ್. ಪೈ ಅವರ ಪತ್ನಿ, ಬೆಂಗಳೂರು ನಗರದ ಆರ್‌.ವಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು