5:07 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಬಂಟ್ವಾಳ | ಕಲ್ಲಡ್ಕ ಬಳಿ ಬಸ್‌ನಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಯ ಬಂಧನ, 20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

10/03/2026, 16:52

ಬಂಟ್ವಾಳ(reporterkarnataka.com): ಸುಮಾರು ತಿಂಗಳ ಹಿಂದೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಯ ಬ್ಯಾಗ್‌ನಿಂದ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ಮಧ್ಯಪ್ರದೇಶ ಮೂಲದ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಯಿಂದ ಕಳವು ಮಾಡಲಾಗಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. 2025ರ ನವೆಂಬರ್ 19ರಂದು ಬ್ರಹ್ಮಾವರ ಮೂಲದ ದಂಪತಿಯು ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿರುವ ಹೋಟೆಲೊಂದರ ಬಳಿ ಬಸ್ ನಿಂತಿದ್ದಾಗ, ದಂಪತಿಯ ಬ್ಯಾಗ್‌ನಲ್ಲಿದ್ದ ಸುಮಾರು 180 ಗ್ರಾಂ ತೂಕದ (ಅಂದಾಜು 20 ಲಕ್ಷ ರೂ. ಮೌಲ್ಯದ) ಚಿನ್ನಾಭರಣಗಳು ಕಳವಾಗಿದ್ದವು. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು, ಮಧ್ಯಪ್ರದೇಶ ನಿವಾಸಿ ಸಮದ್ ಖಾನ್ (37) ಎಂಬಾತನನ್ನು ಬಂಧಿಸಿದ್ದಾರೆ. ಆತನಿಂದ ಕಳವು ಮಾಡಲಾಗಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಂಡು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಅವರ ಮಾರ್ಗದರ್ಶನದಲ್ಲಿ, ಬಂಟ್ವಾಳ ಎಎಸ್‌ಪಿ ಯಶ್ ಕುಮಾರ್ ಶರ್ಮಾ ಅವರ ನಿರ್ದೇಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ತನಿಖಾಧಿಕಾರಿ ಹಾಗೂ ಬಂಟ್ವಾಳ ನಗರ ಇನ್ಸ್‌ಪೆಕ್ಟರ್ ಅನಂತ ಪದ್ಮನಾಭ ನೇತೃತ್ವದ ತಂಡದಲ್ಲಿ ಬಂಟ್ವಾಳ ನಗರ ಠಾಣೆಯ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ, ಸಿಬ್ಬಂದಿಗಳಾದ ವಿಜಯ್ ಕುಮಾರ್, ಸುರೇಶ್ ಕುಮಾರ್, ರಾಜೇಶ್, ಇರ್ಷಾದ್ ಪಿ., ಬಸವರಾಜ್, ವಿಜಯ್ ಕುಮಾರ್, ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ರೇವತಿ ಹಾಗೂ ಜಿಲ್ಲಾ ಪೊಲೀಸ್ ಕಂಪ್ಯೂಟರ್ ವಿಭಾಗದ ಸಂಪತ್ ಕುಮಾರ್ ಮತ್ತು ದಿವಾಕರ್ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು