5:12 PM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಂಟ್ವಾಳ: ಪಡಿತರ ಅಕ್ಕಿ ಅಕ್ರಮ ದಾಸ್ತಾನು; 2103.35 ಕೆಜಿ ಬೆಳ್ತಿಗೆ, 467.10 ಕೆಜಿ ಕುಚ್ಚಲಕ್ಕಿ ವಶ; ಇಬ್ಬರ ವಿರುದ್ಧ ಕೇಸು ದಾಖಲು

24/08/2025, 14:01

ಬಂಟ್ವಾಳ(reporterkarnataka.com): ಇಲ್ಲಿನ ಗೊಳ್ತ ಮಜಲು ಗ್ರಾಮದಲ್ಲಿ ಪಡಿತರ ಅಕ್ಕಿಯನ್ನು ಆಕ್ರಮವಾಗಿ ದಾಸ್ತಾನಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 2103.35 ಕೆಜಿ ಬೆಳ್ತಿಗೆ ಅಕ್ಕಿ ಮತ್ತು 467.10 ಕೆಜಿ ಕುಚ್ಚಲಕ್ಕಿಯನ್ನು ಆಹಾರ ಇಲಾಖೆ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದು, ಇಬ್ಬರ ಮೇಲೆ ಕೇಸು ದಾಖಲಿಸಲಾಗಿದೆ.

ಗೋಳ್ತಮಜಲು ಗ್ರಾಮದ ಪಟ್ಟೆಕೋಡಿ ಎಂಬಲ್ಲಿರುವ ಅಂಗಡಿ ಕಟ್ಟಡವೊಂದರಲ್ಲಿ, ಪಡಿತರ ಅಕ್ಕಿಯನ್ನು ಆಕ್ರಮವಾಗಿ ದಾಸ್ತಾನು ಇಡಲಾಗಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಪ್ರಕರಣದ ಪಿರ್ಯಾದಿದಾರರಾದ ಬಂಟ್ವಾಳ ತಾಲೂಕು ಕಚೇರಿಯ ಆಹಾರ ನಿರೀಕ್ಷಕರಾದ ಎ. ಪ್ರಶಾಂತ ಶೆಟ್ಟಿ ಅವರು, ಬಂಟ್ವಾಳ ನಗರ ಠಾಣಾ ಪೊಲೀಸರ ಸಹಕಾರದೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದ್ದರು. ಆರೋಪಿ ಗೋಳ್ತಮಜಲು ನಿವಾಸಿ ಉಮ್ಮರಬ್ಬ ಎಂಬವರು ಕಟ್ಟಡವೊಂದರಲ್ಲಿ ಒಟ್ಟು 64 ಗೋಣಿ ಚೀಲಗಳಲ್ಲಿ ರೂ 58,288/-ಮೌಲ್ಯದ 2103.35 ಕೆ.ಜಿ ಬೆಳ್ತಿಗೆ ಅಕ್ಕಿ ಮತ್ತು 467.10 ಕೆ.ಜಿ ಕುಚ್ಚಲಕ್ಕಿಯನ್ನು ಆಕ್ರಮವಾಗಿ ಸಂಗ್ರಹಿಸಿಟ್ಟಿರುವುದು ಬೆಳಕಿಗೆ ಬಂದಿದೆ. ಈ ಅಕ್ಕಿಯನ್ನು ಕೆಎ.19.ಡಿ.3896ನೇ ಆಟೋರಿಕ್ಷಾದಲ್ಲಿ ಸಾಗಾಟ ಮಾಡಲು ಸಿದ್ದತೆ ನಡೆಸಿರುವುದು ಕಂಡು ಬಂದಿತ್ತು. ಈ ಕೃತ್ಯದಲ್ಲಿ ಆರೋಪಿಯ ಜೊತೆಗೆ ಇನ್ನೋರ್ವ ಗೋಳ್ತಮಜಲು ನಿವಾಸಿ ರಫೀಕ್ ಎಂಬಾತನೂ ಭಾಗಿಯಾಗಿದ್ದು, ಸ್ಥಳದಲ್ಲಿದ್ದ ಅಕ್ಕಿಯ ಗೋಣಿ ಚೀಲಗಳನ್ನು, ಸಾಗಾಟ ಮಾಡಲು ಬಳಸಿದ ಆಟೋರಿಕ್ಷಾ, ತೂಕದ ಯಂತ್ರ, ಖಾಲಿ ಗೋಣಿ ಚೀಲಗಳು ಸೇರಿದಂತೆ ಇತರೆ ಸೊತ್ತುಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಸ್ವಾಧೀನಪಡಿಸಿಕೊಂಡು, ಆರೋಪಿಗಳ ವಿರುದ್ದ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ: 96/2025, ಕಲಂ 3, 7 ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕಲಂ 18 ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ದತಿ ( ನಿಯಂತ್ರಣ ಆದೇಶ) 2016 ರಂತೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು