7:44 PM Wednesday10 - September 2025
ಬ್ರೇಕಿಂಗ್ ನ್ಯೂಸ್
ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ

ಇತ್ತೀಚಿನ ಸುದ್ದಿ

ಬಂಟ್ವಾಳ: ಲಾರಿ- ಸ್ಕೂಟ‌ರ್ ಡಿಕ್ಕಿ; ಸವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ಸ್ಥಳದಲ್ಲೇ ಸಾವು

01/07/2025, 19:47

ಬಂಟ್ವಾಳ(reporterkarnataka.com): ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಶಂಭೂರು ಕೊಪ್ಪಳ ನಿವಾಸಿ ಚಿದಾನಂದ (50) ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬಿ.ಸಿ. ರೋಡಿನ ಅಜ್ಜಿಬೆಟ್ಟು ಕ್ರಾಸ್‌ನಲ್ಲಿ ನಡೆದಿದೆ.
ಸ್ಕೂಟ‌ರ್ ಸವಾರ ಚಿದಾನಂದ ಅವರು ಬಿ.ಸಿ. ರೋಡು ಪೇಟೆಯಿಂದ ಅಜ್ಜಿಬೆಟ್ಟು ಕ್ರಾಸ್‌ನಲ್ಲಿ ರಸ್ತೆ ಕ್ರಾಸ್ ಮಾಡುವ ವೇಳೆ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿಯ ಚಕ್ರದಡಿ ಸಿಲುಕಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಿದಾನಂದ ಅವರು ಬಂಟ್ವಾಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಯಾಗಿದ್ದಾರೆ. ಅವರಿಗೆ ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿ ಇದ್ದಾರೆ. ಪತ್ನಿ ಶಂಭೂರು ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಬಿ. ಸಿ. ರೋಡ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು