11:53 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಬಂಟ್ವಾಳ ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮ

27/11/2022, 09:01

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜ್ ರಾಷ್ಟೀಯ ಸೇವಾ ಯೋಜನೆ ಹಾಗೂ ಬಂಟ್ವಾಳ ತಾಲೂಕು ವಕೀಲರು ಸೇವಾ ಸಂಘದ ಜಂಟಿ ಆಶ್ರಯದಲ್ಲಿ ಸಂವಿಧಾನ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು.

ಪ್ರಧಾನ ಸಿವಿಲ್ ನ್ಯಾಯಾದೀಶರಾದ ಚಂದ್ರಶೇಖರ ವೈ ತಳವಾರ,
ಕಾರ್ಯಕ್ರಮವನ್ನು ಉದ್ಘಾಟಿಸಿ, ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊ ಳಿಸಿದೆ. ಸರ್ವರಿಗೂ ಸಮಾನತೆ ಒದಗಿಸಿದೆ, ಭಾರತಕ್ಕೆ ಸಂವಿಧಾನ ದೊಡ್ಡ ಬಲ ಎಂಬ ಸಂದೇಶ ನೀಡಿದರು.

ಮುಖ್ಯ ಅತಿಥಿಯಾಗಿ ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಬಿ. ಗಣೇಶಾನಂದ ಸೋಮಯಜಿ ಆಗಮಿಸಿದ್ದರು.

ಕಾಲೇಜಿನ ಪ್ರಾಂಶುಪಾಲೆ ಡಾ. ಸಿಸ್ಟರ್ ಲತಾ ಫೆರ್ನಾಂಡಿಸ್ ಎ ಸಿ , ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸರಕಾರಿ ಸಹಾಯಕ ಅಭಿಯೋಜಕಿ ಹರಿಣಿ, ಬಂಟ್ವಾಳ ನಗರ ಪೊಲೀಸ್ ಠಾಠಾ ನೀರಿಕ್ಷಕರು ವಿವೇಕಾನಂದ ಉಪಸ್ಥಿತರಿದ್ದರು.

ಹಿರಿಯ ವಕೀಲ ಕೆ.ರಮೇಶ್ ಉಪಾಧ್ಯಾಯ ಸಂಪನ್ಮೂಲ ವ್ಯಕ್ತಿ ಯಾಗಿ ಅವರು ಮಾತನಾಡಿದರು.
ಅವರು ಮಾತನಾಡಿ ಭಾರತೀಯ ಸಂವಿಧಾನದ ಇತಿಹಾಸ ಅದರ ರುಪುರೇಷೆಗಳು, ಭಾರತೀಯ ಸಂವಿಧಾನದ ಹಕ್ಕುಗಳು, ಕರ್ತವ್ಯಗಳ ಅರಿವು ಪ್ರತಿಯೊಬ್ಬ ನಾಗರೀಕನಲ್ಲಿ ಇರಬೇಕು ಎಂಬ ಮಾಹಿತಿ ನೀಡಿದರು.

ಸುಪ್ರೀತ ನಿರೂಪಿಸಿದರು, ರಾಷ್ಟೀಯ ಸೇವಾ ಯೋಜನಾ ಘಟಕದ ಸಹ ಯೋಜನಾಧಿಕಾರಿ ವಿಜೇತ ಸ್ವಾಗತಿಸಿದರು, ಕಾಲೇಜಿನ ಮಾನವ ಹಕ್ಕು ಘಟಕದ ಸಂಯೋಜಕರು ನಿಹಾರಿಕಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು