ಇತ್ತೀಚಿನ ಸುದ್ದಿ
ಬಂಟ್ವಾಳ: ಎನ್ನೆಸ್ಸೆಸ್ ಸಹಭಾಗಿತ್ವದಲ್ಲಿ ಅಂತಾರಾಷ್ಟ್ರೀಯ ಮಾತೃ ಭಾಷಾ ದಿನಾಚರಣೆ
25/02/2022, 22:35
ಬಂಟ್ವಾಳ(reporterkarnataka.com):
ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಂಗ್ಲಿಷ್, ಕನ್ನಡ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಬಾಗಿತ್ವದಲ್ಲಿ ಅಂತಾರಾಷ್ಟ್ರೀಯ ಮಾತೃ ಭಾಷಾ ದಿನಾಚರಣೆ ಇತ್ತೀಚಿಗೆ ಜರುಗಿತು.
ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಡಾ. ಸತೀಶ್ ಗಟ್ಟಿ ಅವರು ಮಾತೃ ಭಾಷೆ ಉಳಿಸಲು ಮನೆಯಲ್ಲಿ ಮಕ್ಕಳೊಂದಿಗೆ ಮಾತೃ ಭಾಷೆಯಲ್ಲೇ ಮಾತನಾಡುವ ಅವಶ್ಯಕತೆಯನ್ನು ತಿಳಿಸಿದರು. ಪ್ರೊ. ನಂದಕಿಶೋರ್ಮ ಮತ್ತು ಪ್ರಾಧ್ಯಾಪಕ ಹೈದರಾಲಿ ವಿವಿಧ ಭಾಷೆಗಳ ಪ್ರಾಮುಖ್ಯತೆಯನ್ನು ವಿವರಿಸಿದರು.
ವಿದ್ಯಾರ್ಥಿಗಳು ಮಾತೃ ಭಾಷೆಗಳಾದ ತುಳು, ಕನ್ನಡ, ಕೊಂಕಣಿ, ಬ್ಯಾರಿ, ಕೋಟ, ಮಲಯಾಳಂ, ಹಿಂದಿ, ಸಂಸ್ಕೃತ, ಮರಾಠಿ, ಇಂಗ್ಲಿಷ್, ಮುಂತಾದ ಭಾಷೆಗಳಲ್ಲಿ ಭಾಷಣ ಮಾಡಿದರು. ದೀಪಾ ಕಾರ್ಯಕ್ರಮ ನಿರ್ವಹಿಸಿದರು. ಧನರಾಜ್ ವಂದಿಸಿದರು.