12:34 PM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

Bantwal | ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಆಗ್ರಹಿಸಿ ಪೋಸ್ಟ್ ಕಾರ್ಡ್ ಚಳವಳಿ

25/10/2025, 17:35

ಬಂಟ್ವಾಳ(reporterkarnataka.com): ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂದು ಆಗ್ರಹಿಸಿ ಬಿ.ಸಿ. ರೋಡ್ ನಲ್ಲಿ ಬಂಟ್ವಾಳ ವಕೀಲರ ಸಂಘ ಮತ್ತು ಸಾರ್ವಜನಿಕರ ಸಹಯೋಗದಲ್ಲಿ ಪೋಸ್ಟ್ ಕಾರ್ಡ್ ಚಳವಳಿ ನಡೆಯಿತು.

ಬಂಟ್ವಾಳ ವಕೀಲರ ಸಂಘದ ಮಾಜಿ ಅಧ್ಯಕ್ಷ ಪಿ.ಜಯರಾಮ ರೈ ಅವರು ಪೋಸ್ಟ್ ಕಾರ್ಡ್ ಚಳಿವಳಿಗೆ ಚಾಲನೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ಜಿಲ್ಲಾಧ್ಯಕ್ಷ ಹಾಗೂ ವಕೀಲರ ಸಂಘ (ರಿ), ಬಂಟ್ವಾಳ ಇದರ ಅಧ್ಯಕ್ಷ ರಿಚರ್ಡ್ ಕೊಸ್ತಾ ಎಂ. ರವರು ಪೋಸ್ಟ್ ಕಾರ್ಡ್ ಚಳವಳಿಯನ್ನು ಉದ್ದೇಶಿಸಿ ಮಾತನಾಡಿದರು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಂಗಳೂರು, ಜಿಲ್ಲೆಗಳಿಗೆ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ರಚನೆಯಾಗ ಬೇಕೆಂದು ಎರಡು ದಶಕಗಳ ಹಿಂದೆ ಮಂಗಳೂರಿನ ವಕೀಲರ ಸಂಘದ ಮಾಜಿ ಅಧ್ಯಕ್ಷ ಎಸ್.ಪಿ. ಚಂಗಪ್ಪರವರ ನೇತೃತ್ವದಲ್ಲಿ ಹೋರಾಟ ಪ್ರಾರಂಭವಾಗಿತ್ತು. ಪ್ರಸ್ತುತ ಒಂದುವರೆ ವರ್ಷಗಳಿಂದ ಮಂಗಳೂರಿನ ಈಗಿನ ಅಧ್ಯಕ್ಷರಾದ ರಾಘವೇಂದ್ರ ರವರ ನೇತೃತ್ವದಲ್ಲಿ ಇದಕ್ಕೆ ಮತ್ತೆ ವೇಗ ಸಿಕ್ಕಿದೆ. ಅದರ ಮುಂದುವರಿದ ಹೋರಾಟದ ಅಂಗವಾಗಿ ಪೋಸ್ಟ್ ಕಾರ್ಡ್ ಅಭಿಯಾನ ಇಂದು ಉಡುಪಿ ಮತ್ತು ಮಂಗಳೂರು ಜಿಲ್ಲೆಯ ಎಲ್ಲಾ ವಕೀಲರ ಸಂಘಗಳ ಸಹಯೋಗದಲ್ಲಿ ಏಕ ಕಾಲದಲ್ಲಿ ನಡೆಯುತ್ತಿದೆ.
ಹೈ ಕೋರ್ಟ್ ಪೀಠ ರಚನೆಗೆ ಮಂಗಳೂರಿನಲ್ಲಿ ಜಾಗ ಗುರುತಿಸಿದ್ದು, ಸರಕಾರ ಮತ್ತು ರಾಜ್ಯಪಾಲರಿಗೆ ಒತ್ತಾಯಿಸುವ ನಿಟ್ಟಿನಲ್ಲಿ ಅಭಿಯಾನ ಮತ್ತು ಹೋರಾಟಗಳು ಪ್ರಾರಂಭವಾಗಿದೆ. ಈ ಹೋರಾಟಕ್ಕೆ ಎಲ್ಲಾ ಸಂಘ ಸಂಸ್ಥೆಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹಿರಿಯ, ಕಿರಿಯ ವಕೀಲ ಮಿತ್ರರು, ಸಾರ್ವಜನಿಕರು, ಪೋಸ್ಟ್ ಕಾರ್ಡ್ ಅಭಿಯಾನ ದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು