ಇತ್ತೀಚಿನ ಸುದ್ದಿ
ಬಂಟ್ವಾಳ: ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಬೈಕ್ ಡಿಕ್ಕಿ ಹೊಡೆದು ಪರಾರಿ: ಗಾಯಾಳು ಮೃತ್ಯು
09/02/2022, 00:15

ಬಂಟ್ವಾಳ(reporterkarnataka.com): ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಬೈಕ್ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಬಿಸಿರೋಡಿನಲ್ಲಿ ನಡೆದಿದ್ದು, ಗಾಯಾಳು ಮಹಿಳೆ ಮೃತಪಟ್ಟಿದ್ದಾರೆ.
ಸಂಜೆ 5 ಗಂಟೆಯ ವೇಳೆಗೆ ಸುಮಾರು 52 ವರ್ಷದ ಮಹಿಳೆ ರಸ್ತೆ ದಾಟಲು ಬಿ.ಸಿ. ರೋಡು ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದ ಮುಂಭಾಗದ ರಸ್ತೆಯ ಬದಿಯಲ್ಲಿ ನಿಂತಿದ್ದರು. ಮಂಗಳೂರು ಕಡೆಯಿಂದ ಬಂದ ಬೈಕ್ ಸವಾರ ಏಕಾಏಕಿ ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ.
ಘಟನೆಯಿಂದ ಮಹಿಳೆಯ ತಲೆಗೆ ಗಂಭೀರವಾಗಿ ಗಾಯವಾಗಿದ್ದು ಕೂಡಲೇ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲು ಹೋಗುವ ವೇಳೆಗೆ ದಾರಿ ಮಧ್ಯೆ ಮಹಿಳೆ ಮೃತಪಟ್ಟ ಬಗ್ಗೆ ವೈದ್ಯ ರು ತಿಳಿಸಿದ್ದಾರೆ.
ಈವರಗೆ ಮೃತಪಟ್ಟ ಮಹಿಳೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂಬ ಬಗ್ಗೆ ಮೆಲ್ಕಾರ್ ಟ್ರಾಫಿಕ್ ಪೋಲಿಸರು ತಿಳಿಸಿದ್ದಾರೆ