8:29 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಬಂಟ್ವಾಳ ಕ್ಷೇತ್ರದಲ್ಲಿ ನಾಳೆಯಿಂದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ: ಮಾಜಿ ಸಚಿವ ರಮಾನಾಥ ರೈ

09/03/2023, 21:51

ಬಂಟ್ವಾಳ(reporterkarnataka.com): ಪ್ರಜಾಧ್ವನಿ ಯಾತ್ರೆ ಇದೇ 10 ರಿಂದ ಆರಂಭಗೊಳ್ಳಲಿದ್ದು, 14 ದಿನಗಳ ಕಾಲ ಬಂಟ್ವಾಳ ಕ್ಷೇತ್ರದಾದ್ಯಂತ ಸಂಚರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ಕ್ಷೇತ್ರದಲ್ಲಿನ ಎಲ್ಲ ಗ್ರಾಮಗಳನ್ನು ತಲುಪುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆ ನಡೆಯಲಿದೆ. 5 ವರ್ಷಗಳ ಶಾಸಕತ್ವದ ಅವಧಿಯಲ್ಲಿ ಸಿದ್ಧರಾಮಯ್ಯ ಸರಕಾರ ಮೂಲಕ ಕ್ಷೇತ್ರದಾದ್ಯಂತ ಕೈಗೊಳ್ಳಲಾದ 5 ಸಾವಿರ ಕೋಟಿ ರೂಪಾಯಿಗಳ ಪ್ರಗತಿ ಕಾರ್ಯಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಯಾತ್ರೆ ಮೂಲಕ ಮಾಡಲಾಗುವುದು ಎಂದು ರೈ ನುಡಿದರು.
ಒಂದೇ ದಿನ 3 ಗ್ರಾಮ ಪಂಚಾಯಿತಿಗಳನ್ನು ಒಳಗೊಂಡು ಯಾತ್ರೆಯನ್ನು ನಡೆಸಲಾಗುವುದು. ಪ್ರತಿ ದಿನ ಸಂಜೆ ಸಭೆ ನಡೆಸಲಾಗುತ್ತದೆ. ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಯಾತ್ರೆ ಆರಂಭಗೊಳ್ಳಲಿದೆ. ಪ್ರಮುಖ ಮುಖಂಡರು ಪ್ರತಿದಿನದ ಯಾತ್ರೆಯಲ್ಲಿ ಭಾಷಣಕಾರರಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಇನ್ನೊಬ್ಬರು ಮಾಡಿದ್ದನ್ನು ನಾನು ಮಾಡಿದ್ದು ಎಂದು ಹೇಳಲ್ಲ: ಇನ್ನೊಬ್ಬರು ಮಾಡಿದ ಕೆಲಸವನ್ನು ನಾನು ಮಾಡಿದ್ದು ಎಂದು ಎಲ್ಲೂ ಹೇಳುವುದಿಲ್ಲ. ಬಂಟ್ವಾಳದ ಒಳಚರಂಡಿ ಯೋಜನೆ ಮಂಜೂರಾತಿಯನ್ನು 2017ರ ಅ. 10 ರಂದು ನಾನೇ ಮಾಡಿಸಿದ್ದೇನೆ. ಇದಕ್ಕೆ ದಾಖಲಾತಿ ಇದೆ. 6
ವರ್ಷಗಳಾದರೂ ಕೆಲಸವಾಗಿಲ್ಲ. ಬಹುಗ್ರಾಮ ಕುಡಿವ ನೀರಿನ ಯೋಜನೆ ತನ್ನ ಅವಧಿಯಲ್ಲಿ ಆಗಿದ್ದು. ಬಂಟ್ವಾಳ ತಾಲೂಕಿನ ಹೆಮ್ಮೆ ಎನಿಸಿದ ಪಂಜೆ ಮಂಗೇಶರಾಯರ ಸ್ಮಾರಕ ಭವನ ನಿರ್ಮಾಣಕ್ಕೆ ಎಂಟು ಕೋಟಿಗಳನ್ನು ಮಂಜೂರುಗೊಳಿಸಿ ಕೆಲಸ ಆರಂಭಿಸಲಾಗಿತ್ತು. ಇದುವರೆಗೂ ಈಗಿನ ಶಾಸಕರ ಅವಧಿಯಲ್ಲಿ ಮುಗಿಸಿಲ್ಲ ಎಂದರು.

ಈಗ ಬಂಟ್ವಾಳ ಶಾಂತಿಯುತವಾಗಿದೆ ಎನ್ನುತ್ತಾರೆ. ಹಿಂದೆ ಮತೀಯ ಹೆಸರಲ್ಲಿ ಹತ್ಯೆಯನ್ನು ಕಾಂಗ್ರೆಸ್ ಮಾಡಿರಲಿಲ್ಲ. ಹತ್ಯೆ ಆರೋಪಿಗಳೊಂದಿಗೆ ತಿರುಗಾಟ ಮಾಡಿದವರು ಯಾರು? ಮರಳು ಮಾಫಿಯಾ, ಇಸ್ಪೀಟ್ ಕ್ಲಬ್ ನವರ ಬ್ಯಾನರ್ ಕಟೌಟ್ ಗಳು ಈಗ ರಾರಾಜಿಸುತ್ತಿವೆ ಎಂದರು
ಯಾತ್ರೆ ಕುರಿತು ಮುಖಂಡ ಪಿಯೂಸ್ ಎಲ್. ರೋಡ್ರಿಗಸ್ ಮಾಹಿತಿ ನೀಡಿದರು. ಚಂದ್ರಪ್ರಕಾಶ್ ಶೆಟ್ಟಿ, ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಪದ್ಮಪ್ರಸಾದ್ ಜೈನ್, ಸುದರ್ಶನ ಜೈನ್, ಮಧುಸೂಧನ ಶೆಣೈ, ಅಬ್ಬಾಸ್ ಆಲಿ ಬಿ.ಎಂ., ಮಾಯಿಲಪ್ಪ ಸಾಲಿಯಾನ್. ಸುರೇಶ್ ಜೋರ, ಚಂದ್ರಶೇಖರ ಪೂಜಾರಿ, ಚಂದ್ರಶೇಖರ ಭಂಡಾರಿ, ಸುಧಾಕರ ಶೆಣೈ ಖಂಡಿಗ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು