8:56 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Bantwal | ಸುಜೀರು: ಪ್ರಿಯತಮೆಗೆ ಗಂಭೀರ ಹಲ್ಲೆ ನಡೆಸಿದ ಪ್ರೇಮಿ ನೇಣಿಗೆ ಶರಣು: 8 ವರ್ಷಗಳ ಪ್ರೀತಿಗೆ ತೆರೆ

07/07/2025, 19:54

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಪ್ರೇಮಿಯೊಬ್ಬ ಪ್ರಿಯತಮೆಗೆ ಹಲ್ಲೆ ಮಾಡಿ ಬಳಿಕ ನೇಣಿಗೆ ಶರಣಾದ ಘಟನೆ ತಾಲೂಕಿನ ಪುದು ಗ್ರಾಮದ ಸುಜೀರು ದೈಯಡ್ಕ ಎಂಬಲ್ಲಿ ಸೋಮವಾರ ಮಧ್ಯಾಹ್ನದ ವೇಳೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಡ್ಮಾಣ್ ಗ್ರಾಮದ ಕಾಂಜೀಲಕೋಡಿ ನಿವಾಸಿ 30 ವರ್ಷದ ಸುಧೀರ್ ಎಂದು ಗುರುತಿಸಲಾಗಿದೆ.
ಗಂಭೀರವಾಗಿ ಗಾಯಗೊಂಡ ಯುವತಿ ದಿವ್ಯ ಯಾನೆ ದೀಕ್ಷಿತಾ(26) ಎಂಬಾಕೆಯನ್ನು ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಇವರಿಬ್ಬರು ಕಳೆದ 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು ಕೆಲ ತಿಂಗಳುಗಳಿಂದ ಮನಸ್ತಾಪವಿದ್ದು, ಮದುವೆಗೆ ಒತ್ತಾಯಿಸುತ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ಯಾವುದೋ ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಸುಧೀರ್ ದಿವ್ಯ ಮೇಲೆ ಮನಬಂದಂತೆ ಥಳಿಸಿದ್ದು, ಯುವತಿ ಸಾವನ್ನಪ್ಪಿದ್ದಾಳೆ ಎಂದು ಭಾವಿಸಿ ಆಕೆ ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ‌ ಎಂದು ತಿಳಿದು ಬಂದಿದೆ.
ಗಾಯಾಳು ದಿವ್ಯ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಯುವಕ ಸುಧೀರ್ ಈ ಹಿಂದೆ ಕೂಡ ಟವರ್ ಹತ್ತಿ ಈಕೆಯನ್ನು ಹೆದರಿಸಿದ್ದ ಅನ್ನುವ ಮಾಹಿತಿ ಇದೆ. ಸದ್ಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು