7:39 AM Thursday1 - October 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಬಂಟ್ವಾಳ ಎಸ್ ವಿಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ: ಕಾಲೇಜು ಸಂಚಾಲಕ , ಶಿಕ್ಷಕರ ರಾಜೀನಾಮೆಗೆ ಆಗ್ರಹ

20/05/2022, 22:32

ಬಂಟ್ವಾಳ(reporterkarnataka.com):
ಬಂಟ್ವಾಳ ತಾಲೂಕಿನ ಪ್ರತಿಷ್ಠಿತ ಎಸ್ ವಿ ಎಸ್ ಕಾಲೇಜು ಈಗ ಅವ್ಯವಸ್ಥೆ ಹಾಗೂ ಗೊಂದಲದ ತಾಣವಾಗಿದ್ದು , ಆಡಳಿತ ಮಂಡಳಿಯ ವಿರುದ್ಧ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಪ್ರಕಾಶ್ ಶೆಣೈ ವಿರುದ್ಧ ಮಹಿಳಾ ದೌರ್ಜನ್ಯದ ಪ್ರಕರಣ ದಾಖಲಾಗಿದ್ದು , ಇತ್ತಿಚೆಗೆ ಅವರ ಬಂಧನ ಕೂಡ ಆಗಿತ್ತು. ಜಾಮೀನಿನಲ್ಲಿ ಬಿಡುಗಡೆಯಾಗಿರುವ ಸಂಚಾಲಕರು ಕಾಲೇಜಿನ ಅವ್ಯವಸ್ಥೆಯನ್ನು ಪ್ರಶ್ನಿಸಿದ ವಿದ್ಯಾರ್ಥಿಗಳ ಮೇಲೆ ಪ್ರಾಂಶುಪಾಲರನ್ನು ಮುಂದಿಟ್ಟು ವಿದ್ಯಾರ್ಥಿಗಳಿಗೆ ಕಿರುಕಿಳ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.


ಎಫ್.ಐ.ಆರ್ ದಾಖಲಾಗಿರುವ ಕಾಲೇಜು ಸಂಚಾಲಕರ ಪ್ರಕಾಶ್  ಶೆಣೈ ತಕ್ಷಣ ರಾಜೀನಾಮೆ ನೀಡಬೇಕು ಹಾಗೂ ಎಫ್.ಐ.ಆರ್.ದಾಖಲಾಗಿರುವ ಇಬ್ಬರು ಶಿಕ್ಷಕರನ್ನು ತಕ್ಷಣ ವಜಾ ಮಾಡುವಂತೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಶೈಕ್ಷಣಿಕ ವ್ಯವಸ್ಥೆಗಳ ಕೊರತೆ‌ ವಿರೋಧಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು