ಇತ್ತೀಚಿನ ಸುದ್ದಿ
ಬಂಟ್ವಾಳ: ಚೆನ್ನೈತ್ತೋಡಿ ಬಳಿ ಅಂಗಡಿಗೆ ನುಗ್ಗಿದ ಕಾರು; ಗಂಭೀರ ಗಾಯಗೊಂಡ ವೃದ್ದ ಮಹಿಳೆ ಸಾವು
25/02/2025, 13:31

ಮಂಗಳೂರು(reporterkarnataka.com): ಕಾರೊಂದು ಅಂಗಡಿಗೆ ನುಗ್ಗಿದ ಪರಿಣಾಮ ವೃದ್ಧ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಎಂಬಲ್ಲಿ ನಡೆದಿದೆ.
ಶೋಭಾ ಎಂಬವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಪರಿಣಾಮ ವಾಮದಪದವು ನಿವಾಸಿ ಸುಮತಿ(91) ಎಂಬವರು ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ವೇಗವಾಗಿ ಬಂದ ಕಾರು ಗ್ರಾಹಕ ಹಾಗೂ ಅಂಗಡಿ ಮುಂದೆ ಕುಳಿತಿದ್ದ ವೃದ್ಧೆಗೆ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ವೃದ್ದೆ ಸುಮತಿ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅಪಘಾತದ ಭೀಕರ ದೃಶ್ಯ ಅಂಗಡಿ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಅಂಗಡಿಗೆ ಬಂದಿದ್ದ ಗ್ರಾಹಕ ಲೂಯಿಸ್ ಡಿಕೋಸ್ತಾ ಅವರಿಗೆ ಡಿಕ್ಕಿ ಹೊಡೆದ ಕಾರು ಬಳಿಕ ಅಂಗಡಿ ಮುಂದೆ ಕೂತಿದ್ದ ವೃದ್ಧೆ ಸುಮತಿ ಅವರಿಗೆ ಡಿಕ್ಕಿ ಹೊಡೆದಿದೆ.
ಘಟನೆ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.