11:26 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಬಂಟ್ವಾಳ: ‘ಬಲೆ ತುಲು ಲಿಪಿ ಕಲ್ಪುಗ’ ಕಾರ್ಯಾಗಾರ ಉದ್ಘಾಟನೆ

23/08/2021, 09:49

ಬಂಟ್ವಾಳ(reporterkarnataka.com):

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಮತ್ತು ತುಲುನಾಡ ಯುವಸೇನೆ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ‘ಬಲೆ ತುಲು ಲಿಪಿ ಕಲ್ಪುಗ’ ಕಾರ್ಯಾಗಾರ ಉದ್ಘಾಟನಾ ಸಮಾರಂಭ ಬಂಟ್ವಾಳದಲ್ಲಿ ಭಂಡಾರಿಬೆಟ್ಟುವಿನ ಯುವಜನ ವ್ಯಾಯಾಮ ಶಾಲೆಯಲ್ಲಿ ಭಾನುವಾರ ನಡೆಯಿತು.

ಜೈ ತುಲುನಾಡ್ ಅಧ್ಯಕ್ಷ ಸುದರ್ಶನ್ ಸುರತ್ಕಲ್ ಅಧ್ಯಕ್ಷತೆಯಲ್ಲಿ ನಡೆದ ತುಲು ಲಿಪಿ ಕಲಿಯುವ ಕಾರ್ಯಾಗಾರವನ್ನು ಚೇತನ್ ಮುಂಡಾಜೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತುಲು ಲಿಪಿ ಶಿಕ್ಷಕರಾದ ಜಗದೀಶ ಗೌಡ ಕಲ್ಕಳ್ ಅವರು ತುಲು ಲಿಪಿ ಬರೆಯುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.

ಚೇತನ್ ಮುಂಡಾಜೆ ಮಾತನಾಡಿ, ತುಲು ಭಾಷೆಗೆ ಲಿಪಿ ಇದ್ದರೂ ಅದೆಷ್ಟೋ ಜನರಿಗೆ ತಿಳಿಯದೆ ಹೋಗಿದೆ. ತುಲು ಭಾಷೆಗೆ ಸುಮಾರು 2500 ವರ್ಷದ ಇತಿಹಾಸ ಇದೆ. ಇಂತಹ ಭಾಷೆಯನ್ನು ನಾವು ಕಲಿಯದೆ ಹಿಂದುಳಿಯುವಂತೆ ಮಾಡಿದ್ದೇವೆ. ಇನ್ನಾದರೂ ಈ ಭಾಷೆಯನ್ನು, ಲಿಪಿಯನ್ನು ಕಲಿತು ಮುಂದಿನ ಪೀಳಿಗೆಗೆ ಉಳಿಸುವ ಕಾರ್ಯ ಮಾಡುವ ಎಂದರು.

ಜೈ ತುಲುನಾಡ್ ಸಂಘಟನೆಯ ಅಧ್ಯಕ್ಷ ಸುದರ್ಶನ್ ಸುರತ್ಕಲ್ ಮಾತನಾಡಿ, ಸಂಘಟನೆ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡುವ ಕಾಲದಿಂದ ಇಂದಿನ ತನಕವೂ ತುಲುವಿಗೆ ಸ್ಥಾನಮಾನಕ್ಕಾಗಿ ಶಕ್ತಿಮೀರಿ ಪ್ರಯತ್ನ ಮಾಡುತ್ತಿದ್ದೇವೆ. ಅಕಾಡೆಮಿಯೊಟ್ಟಿಗೆ ಸಂಘಟನೆಯು ಸಹಕಾರ ನೀಡುತ್ತಾ ಬರುತ್ತಿದೆ. ತುಲುನಾಡಿನ ಎಲ್ಲಾ ಅಂಗಡಿ, ಶಾಲೆ, ಕಚೇರಿಯಲ್ಲಿ ತುಲು ಲಿಪಿಯ ನಾಮಫಲಕ ಹಾಕಬೇಕು ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಸೀತಾರಾಮ ಸಜಿಪ, ಜೈ ತುಲುನಾಡ್ ಉಪಾಧ್ಯಕ್ಷರಾದ ಉದಯ್ ಪೂಂಜ, ಉಪ ಸಂಘಟನಾ ಕಾರ್ಯದರ್ಶಿ ಅಶ್ರಫ್ ಭಸ್ಥಿಕೋಡಿ, ತುಲು ಲಿಪಿ ಶಿಕ್ಷಕರಾದ ಪೂರ್ಣಿಮಾ ಬಂಟ್ವಾಳ ಹಾಗೂ ಪೃಥ್ವಿ ತುಲುವೆ ಉಪಸ್ಥಿತರಿದ್ದರು. 

ಧೀರಜ್ ಗಣ್ಯರನ್ನು ಸ್ವಾಗತಿಸಿ, ಮಹೇಶ್ ವಂದಿಸಿದರು. ಲಿಖಿತ್‌ರಾಜ್ ಸೆರ್ಕಳ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು