ಇತ್ತೀಚಿನ ಸುದ್ದಿ
ಬಂಟ್ವಾಳ ಕಾರ್ಮೆಲ್ ಕಾಲೇಜು ಎನ್ನೆಸ್ಸೆಸ್ ಘಟಕದಿಂದ ಮತದಾರರ ಜಾಗೃತಿ ಕಾರ್ಯಕ್ರಮ; ಬೀದಿ ನಾಟಕ ಪ್ರದರ್ಶನ
30/04/2023, 21:19
ಚಿತ್ರ/ವರದಿ:ಅನುಷ್ ಪಂಡಿತ್ ಮಂಗಳೂರು
ಬಂಟ್ವಾಳ(reporterkarnataka.com):ಮೊಡಂಕಾಪು ಕಾರ್ಮೆಲ್ ಕಾಲೇಜ್‌ನ ರಾಷ್ಟ್ರೀಯ ಸೇವಾಯೋಜನಾ ಘಟಕ ಮತ್ತು ದಕ್ಷಿಣ ಕನ್ನಡ ಸ್ವೀಪ್ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ಮತ್ತು ಮತದಾರರ ಅರಿವು ಜಾಥವನ್ನು ಕೈಕಂಬ ದಿಂದ ಬಿಸಿರೋಡ್ ವರೆಗೆ ನಡೆಸಲಾಯಿತು.
ಜಾಥಾಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ಕುಮಾರ್ ಚಾಲನೆ ನೀಡಿದರು.
ಅವರು ಮಾತನಾಡಿ ಪ್ರತಿಯೊಬ್ಬರೂ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಇದರಿಂದ ಮಾತ್ರ ಮತದಾನದ ಉದ್ದೇಶದ ಸಾಕಾರಗೊಳ್ಳಲು ಸಾಧ್ಯ ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿ ಕಾರ್ಯತತ್ಪರವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಚುನಾವಣಾ ಮಂಡಳಿ, ಬಂಟ್ವಾಳ ತಾಲೂಕು ಆಡಳಿತ ಸಿಬ್ಬಂದಿಗಳು,ಬಂಟ್ವಾಳ ನಗರಸಭೆ, ಬಂಟ್ವಾಳ ಪುರಸಭೆ, ಬಂಟ್ವಾಳದ ಅಧಿಕಾರಿ ವರ್ಗದವರು ಮತ್ತು ಮಂಗಳೂರು ವಿಶ್ವವಿದ್ಯಾ ನಿಲಯದ ಎನ್ ಎಸ್ಎಸ್ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ, ಕಾಲೇಜಿನ ಪ್ರಾಂಶುಪಾಲೆ ಡಾ.ಸಿಸ್ಟರ್ ಲತಾ ಫೆರ್ನಾಂಡಿಸ್, ಯೋಜನಾಧಿಕಾರಿ ಕೀರ್ತನ್, ಸಹಯೋಜನಾಧಿಕಾರಿ ವಿಜೇತ ಹಾಗೂ ಉಪನ್ಯಾಸಕರಾದ ಸುಪ್ರೀತ ಇವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಕಾರ್ಯಕ್ರಮದ ಕೊನೆಗೆ ಕಾಲೇಜಿನ ಘಟಕದ ಸ್ವಯಂಸೇವಕರಿಂದ ಮತ ದಾನದ ಕುರಿತು ಬೀದಿ ನಾಟಕವನ್ನು ಪ್ರದರ್ಶನ ಮಾಡಲಾಯಿತು.