11:11 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

‌‌‌‌‌‌‌ಬಂಟ್ವಾಳ ಕಾರ್ಮೆಲ್ ಕಾಲೇಜು ಎನ್ನೆಸ್ಸೆಸ್ ಘಟಕದಿಂದ ಮತದಾರರ ಜಾಗೃತಿ ಕಾರ್ಯಕ್ರಮ; ಬೀದಿ ನಾಟಕ ಪ್ರದರ್ಶನ

30/04/2023, 21:19

ಚಿತ್ರ/ವರದಿ:ಅನುಷ್ ಪಂಡಿತ್ ಮಂಗಳೂರು

ಬಂಟ್ವಾಳ(reporterkarnataka.com):
ಮೊಡಂಕಾಪು ‌‌‌‌‌‌‌‌ಕಾರ್ಮೆಲ್ ಕಾಲೇಜ್‌ನ ರಾಷ್ಟ್ರೀಯ ಸೇವಾಯೋಜನಾ ಘಟಕ ಮತ್ತು ದಕ್ಷಿಣ ಕನ್ನಡ ಸ್ವೀಪ್ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ಮತ್ತು ಮತದಾರರ ಅರಿವು ಜಾಥವನ್ನು ಕೈಕಂಬ ದಿಂದ ಬಿಸಿರೋಡ್ ವರೆಗೆ ನಡೆಸಲಾಯಿತು.
ಜಾಥಾಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ಕುಮಾರ್ ಚಾಲನೆ ನೀಡಿದರು.
ಅವರು ಮಾತನಾಡಿ ಪ್ರತಿಯೊಬ್ಬರೂ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಇದರಿಂದ ಮಾತ್ರ ಮತದಾನದ ಉದ್ದೇಶದ ಸಾಕಾರಗೊಳ್ಳಲು ಸಾಧ್ಯ ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿ ಕಾರ್ಯತತ್ಪರವಾಗಿದೆ ಎಂದರು.


ಕಾರ್ಯಕ್ರಮದಲ್ಲಿ ಚುನಾವಣಾ ಮಂಡಳಿ, ಬಂಟ್ವಾಳ ತಾಲೂಕು ಆಡಳಿತ ಸಿಬ್ಬಂದಿಗಳು,ಬಂಟ್ವಾಳ ನಗರಸಭೆ, ಬಂಟ್ವಾಳ ಪುರಸಭೆ, ಬಂಟ್ವಾಳದ ಅಧಿಕಾರಿ ವರ್ಗದವರು ಮತ್ತು ಮಂಗಳೂರು ವಿಶ್ವವಿದ್ಯಾ ನಿಲಯದ ಎನ್ ಎಸ್ಎಸ್ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ, ಕಾಲೇಜಿನ ಪ್ರಾಂಶುಪಾಲೆ ಡಾ.ಸಿಸ್ಟರ್ ಲತಾ ಫೆರ್ನಾಂಡಿಸ್, ಯೋಜನಾಧಿಕಾರಿ ಕೀರ್ತನ್, ಸಹಯೋಜನಾಧಿಕಾರಿ ವಿಜೇತ ಹಾಗೂ ಉಪನ್ಯಾಸಕರಾದ ಸುಪ್ರೀತ ಇವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.


ಕಾರ್ಯಕ್ರಮದ ಕೊನೆಗೆ ಕಾಲೇಜಿನ ಘಟಕದ ಸ್ವಯಂಸೇವಕರಿಂದ ಮತ ದಾನದ ಕುರಿತು ಬೀದಿ ನಾಟಕವನ್ನು ಪ್ರದರ್ಶನ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು