12:29 PM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಬಂಟ್ವಾಳ ಕೆಂಪುಗುಡ್ಡೆ ಅಂಬೇಡ್ಕರ್ ಸಮುದಾಯ ಭವನದಲ್ಲಿ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ

24/01/2022, 20:58

ಮಂಗಳೂರು(reporterkarnataka.com); ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇದರ ರಾಷ್ಟ್ರೀಯ ಸೇವಾ ಯೋಜನೆ “ಅಮೃತ ಸಮುದಾಯ ಅಭಿವೃದ್ಧಿ ಯೋಜನೆ” ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮ ಬಂಟ್ವಾಳ ಕೆಂಪುಗುಡ್ಡೆ ಅಂಬೇಡ್ಕರ್ ಸಮುದಾಯ ಭವನದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಸಂತ ಅಗ್ನೇಸ್ ಕಾಲೇಜಿನ  ಸಹಾಯಕ ಪ್ರಾಧ್ಯಾಪಕ ಹಾಗೂ ಸಂಸ್ಕೃತಿ ಚಿಂತಕ ಡಾ. ಅರುಣ್ ಉಳ್ಳಾಲ್ ಮಾತನಾಡಿ “ತುಳುನಾಡ ಸಂಸ್ಕೃತಿ ಮತ್ತು ಯುವಜನತೆಯ” ಕುರಿತಾಗಿ ಶಿಬಿರಾರ್ಥಿಗಳಿಗೆ ಉಪನ್ಯಾಸ ನೀಡಿದರು. ಅದಲ್ಲದೇ ತುಳುನಾಡಿನ ಆರಾಧನೆಗಳ ಬಗ್ಗೆ ಎಲ್ಲರಲ್ಲೂ ವಿಶೇಷ ಆಸಕ್ತಿಯನ್ನು ಹುಟ್ಟಿಸಿದರು ಜೊತೆಗೆ ಜ್ಞಾನವನ್ನು ಹೆಚ್ಚಿಸಿದರು. ಯುವ ಜನತೆ ಮಾಡಬೇಕಾದಂತಹ ದೇಶ ಸೇವೆ ಮತ್ತು ಪಾಲಿಸಬೇಕಾದ ಕರ್ತವ್ಯಗಳನ್ನು ಮನಮುಟ್ಟುವಂತೆ ಮಾತಾಡಿದರು.

ಶಿಬಿರಾಧಿಕಾರಿ ಪ್ರೊ.ಹೈದರಾಲಿ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಸಮಾಜ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ

ಡಾ.ವೈಶಾಲಿ ಯು. ವಾರ್ಷಿಕ ವಿಶೇಷ ಶಿಬಿರ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶವನ್ನು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು