8:34 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಕೊಳ್ನಾಡು, ಮಂಚಿ, ಸಾಲೆತ್ತೂರು ಗ್ರಾಮಗಳಲ್ಲಿ ಮನೆ ಮನೆ ಭೇಟಿ: ಮತಯಾಚನೆ

19/04/2023, 21:41

ಬಂಟ್ವಾಳ(reporterkarnataka.com): ಬಂಟ್ವಾಳ ಕ್ಷೇತ್ರ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಅವರು ಬುಧವಾರ ಬೆಳಿಗ್ಗೆಯಿಂದ ರಾತ್ರಿವರೆಗೆ ಬಂಟ್ವಾಳ ತಾಲೂಕಿನ ಕೊಳ್ನಾಡು, ಮಂಚಿ ಮತ್ತು ಸಾಲೆತ್ತೂರು ಗ್ರಾಮಗಳಲ್ಲಿ ಪ್ರಮುಖರ ಮನೆಗಳಿಗೆ ಹಾಗೂ ಎಸ್.ಸಿ ಕಾಲೋನಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.
ಶಾಸಕರು ಭೇಟಿ ನೀಡಿದ ಸಂದರ್ಭದಲ್ಲಿ ಮತದಾರರಿಗೆ ಕಳೆದ 5 ವರ್ಷದಲ್ಲಿ ಕ್ಷೇತ್ರದಲ್ಲಿ ಮಾಡಲಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಹಾಗೂ ರಾಜ್ಯ ಸರಕಾರದ ಪ್ರಮುಖ ಯೋಜನೆಗಳ ಬಗ್ಗೆ ತಿಳಿಸಿದ ಅವರು ಬಿಜೆಪಿ ನೀಡಿದ ಎಲ್ಲಾ ಭರವಸೆಗಳನ್ನು ಪೂರೈಸಿದೆ ಎಂದು ತಿಳಿಸಿದರು.
ಬಂಟ್ವಾಳ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಯಾವುದೇ ಸಂಘರ್ಷವಿಲ್ಲದೆ, ಸರ್ವರಿಗೂ ಸಮಾನವಾದ ರೀತಿಯಲ್ಲಿ ನ್ಯಾಯ ಒದಗಿಸುವ ಆಡಳಿತ ನಡೆಸಿದ್ದೇನೆ. ಮುಂದಿನ ಅವಧಿಯಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳ ಜೊತೆ ಶಾಂತಿಯ ಬಂಟ್ವಾಳವನ್ನು ಮುಂದುವರಿಸಿಕೊಂಡು ಹೋಗಲು ಅವಕಾಶ ನೀಡಬೇಕು.
ನೀವು ನೀಡಿದ ಪ್ರತಿಯೊಂದು ಮತಕ್ಕೂ ಗೌರವ ಸಿಗುವುದರ ಜೊತೆಗೆ , ನಿಮ್ಮ ಧ್ವನಿಯಾಗುತ್ತೇನೆ ಎಂದರು.
ಪ್ರಮುಖರಾದ ಮಾಧವ ಮಾವೆ, ಪುಷ್ಪರಾಜ್ ಚೌಟ, ಶಿವಪ್ರಸಾದ್ ಶೆಟ್ಟಿ, ರಾಜರಾಮ್ ಹೆಗ್ಡೆ ಕುದ್ರಿಯ, ವಿಶ್ವನಾಥ ಪೂಜಾರಿ ಕಟ್ಟತ್ತಿಲ, ಅಭಿಷೇಕ್ ರೈ, ಲೋಹಿತ್ ಕೆಳಗಿನ ಅಗರಿ, ಹರೀಶ್ ಟೈಲರ್, ಪ್ರಶಾಂತ್ ಶೆಟ್ಟಿ ಅಗರಿ, ಸುಧಾಕರ ಕಾಡುಮಠ, ನಾರಾಯಣ ಶೆಟ್ಟಿ ಕುಲ್ಯಾರು, ಶಂಕರ್ ಟೈಲರ್, ಕೃಷ್ಣಪ್ರಸಾದ್ ಶೆಟ್ಟಿ,ಆನಂದ ಪೂಜಾರಿ, ನಾಗರಾಜ ಆಳ್ವ, ಪಾಪಣ್ಣ, ಗಂಗಾಧರ ಆಚಾರ್ಯ, ಮೋಹನ್ ದಾಸ್ ಹೆಗ್ಡೆ, ಪುಷ್ಪಕಾಮತ್, ವಿಜಯ ಪ್ರಭು, ಪ್ರಮೀಳಾ, ಗಣೇಶ್ ಐತಾಳ್, ಕೇಶವ ರಾವ್ ಮಂಚಿ, ಪ್ರಭಾಕರ ರೈ, ಕೃಷ್ಣಪ್ಪ. ಪುಷ್ಪರಾಜ್, ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು