5:49 AM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಬಂಟ್ವಾಳ: ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಐಕ್ಯತಾ ದಿನ ಆಚರಣೆ

28/11/2022, 20:52

ಬಂಟ್ವಾಳ(reporterkarnataka.com)
ರಾಷ್ಟ್ರೀಯ ಸೇವಾ ಯೋಜನೆ ಕಾರ್ಮೆಲ್ ಕಾಲೇಜ್ ಮೊಡಂಕಾಪು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಬಂಟ್ವಾಳ ನಗರ ಪೊಲೀಸ್ ಠಾಣೆ ಇವರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಐಕ್ಯತಾ ದಿನ ಆಚರಿಸಲಾಯಿತು.



ಬಂಟ್ವಾಳ ನಗರ ಪೊಲೀಸ್ ಠಾಣಾಧಿಕಾರಿ ಕಲೈಮಾರ್ ಪಿ.ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.
ಅವರು ಮಾತನಾಡಿ,ಭಾರತ ಒಂದು ಜಾತ್ಯತೀತ ರಾಷ್ಟ್ರವಾಗಿದೆ, ನಮ್ಮ ದೇಶ ಪ್ರಜಾಪ್ರಭುತ್ವದ ತಳಹದಿಯ ಮೇಲೆ ರೂಪುಗೊಂಡಿದೆ. ನಮ್ಮ ದೇಶವು ಜಾತಿ ಧರ್ಮ ಮತ ಪ್ರಾದೇಶಿಕ ಭೇದ ಭಾವಗಳನ್ನು ಬಿಟ್ಟು ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಬೆಳೆಸುತ್ತದೆ. ಎಂಬ ಸಂದೇಶವನ್ನು ರಾಷ್ಟ್ರೀಯ ಸ್ವಯಂಸೇವಕರಿಗೆ ನೀಡಿದರು.


ಡಾ.ಸಿಸ್ಟರ್ ಲತಾ ಫರ್ನಾಂಡಿಸ್ ಎಸಿ ಪ್ರಾಂಶುಪಾಲರು ಕಾರ್ಮೆಲ್ ಕಾಲೇಜ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರತಿಜ್ಞಾವಿಧಿ ಭೋದಿಸಿದರು.
ತದನಂತರ ಜಾಥವನ್ನು ಹಮ್ಮಿಕೊಳ್ಳಲಾಯಿತು. ಜಾಥದಲ್ಲಿ 50 ರಾಷ್ಟ್ರೀಯ ಸೇವಾಯೋಜನೆಯ ಸ್ವಯಂಸೇವಕ, ಸೇವಕಿಯರು ಪಾಲ್ಗೊಂಡಿದ್ದರು. ಕಾರ್ಮೆಲ್ ಕಾಲೇಜ್ ಆವರಣದಿಂದ ಬಿಸಿ ರೋಡಿನವರೆಗೆ ನಡೆದ ಜಾಥ. ಯಶಸ್ವಿಯಾಗಿ ನೆರವೇರಿತು.

ಕನ್ನಡ ಉಪನ್ಯಾಸಕಿ ಸುಪ್ರೀತಾ ಕಾರ್ಯಕ್ರಮವನ್ನು ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಕೀರ್ತನ್ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ನಾಯಕಿ ಆಸಿಯಾ ವಂದಿಸಿದರು.
ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು