2:51 PM Tuesday23 - December 2025
ಬ್ರೇಕಿಂಗ್ ನ್ಯೂಸ್
ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ

ಇತ್ತೀಚಿನ ಸುದ್ದಿ

ಬಂಟ್ವಾಳ: ಸಂವಿಧಾನ ದಿನಾಚರಣೆ ಪ್ರಯುಕ್ತ ಕಾನೂನು ಕಾರ್ಯಾಗಾರ

04/12/2024, 13:17

ಬಂಟ್ವಾಳ(reporterkarnataka.com):ವಕೀಲರ ಸಂಘ (ರಿ), ಬಂಟ್ವಾಳ ಮತ್ತು ಅಧಿವಕ್ತಾ ಪರಿಷತ್ ಕರ್ನಾಟಕ – ದಕ್ಷಿಣ ಪ್ರಾಂತ, ದಕ್ಷಿಣ ಕನ್ನಡ ಜಿಲ್ಲೆ – ಬಂಟ್ವಾಳ ಘಟಕದ ಜಂಟಿ ಅಶ್ರಯದಲ್ಲಿ ಸಂವಿಧಾನ ದಿನಾಚರಣೆ ಮತ್ತು ವಕೀಲರ ದಿನಾಚರಣೆ ಯ ಪ್ರಯುಕ್ತ ಕಾನೂನು ಕಾರ್ಯಾಗಾರ ಜೆಎಂಎಫ್ ಸಿ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಭಾಗ್ಯಮ್ಮ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಕಳದ ಹಿರಿಯ ನ್ಯಾಯವಾದಿ ಎಂ. ಕೆ. ವಿಜಯ್ ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಾಗಾರದಲ್ಲಿ ಭಾಗವಹಿಸಿ ಪ್ರೊಫೆಸನಲ್ ಏಥಿಕ್ಸ್ ನ ಬಗ್ಗೆ ತಮ್ಮ ಅಪಾರ ಅನುಭವ ಮತ್ತು ಹಿರಿತನದ ಅನುಭವಗಳನ್ನು ಸೇರಿಸಿ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಮುಖ್ಯ ಅತಿಥಿಯಾಗಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಕೃಷ್ಣಮೂರ್ತಿ ಎನ್. ಹಾಗೂ ಅಧಿವಕ್ತಾ ಪರಿಷತ್ ಬಂಟ್ವಾಳದ ಅಧ್ಯಕ್ಷರು ಉಮಾ ಎನ್. ಸೋಮಯಾಜಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಧಿವಕ್ತಾ ಪರಿಷತ್ ನ ಸಮಾಜಿಕ ಕಾರ್ಯದ ಅಂಗವಾಗಿ ವಕೀಲರ ದಿನಾಚರಣೆಯ ಪ್ರಯುಕ್ತ ಪರಂಗಿಪೇಟೆ
ಅರ್ಕುಳದ ಮಾತಾ ಲಕ್ಷಣಿ ಶಾಂತಿಧಾಮ ಆಶ್ರಮಕ್ಕೆ 32,000/ ಮೌಲ್ಯದ ಫ್ರಿಜ್ ನ್ನು ಆಶ್ರಮದ ಸ್ಥಾಪಕರಾದ ಹರೀಶ್ ಪೆರ್ಗಡೆ ಅವರಿಗೆ ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಎಂ. ಕೆ. ವಿಜಯ್ ಕುಮಾರ್ ಅವರನ್ನು ವಕೀಲರ ಸಂಘ (ರಿ) ಬಂಟ್ವಾಳದ ವತಿಯಿಂದ ಸನ್ಮಾನಿಸಿ ಗೌರವಿಸಿಲಾಯಿತು. ವಕೀಲರ ಸಂಘ ಬಂಟ್ವಾಳದ ಅಧ್ಯಕ್ಷರಾದ ರಿಚರ್ಡ್ ಕೊಸ್ತಾ ಎಂ. ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಅತಿಥಿ ಅಭ್ಯಾಗತರನ್ನು ಯುವ ವಕೀಲರು ಅದ ಸ್ವರ್ಣ ಗೌರಿ ಸ್ವಾಗತಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಅಧಿವಕ್ತಾ ಪರಿಷತ್ ನ ಜಿಲ್ಲೆಯ ಸದಸ್ಯರಾದ ವೀರೇಂದ್ರ ಎಂ. ಸಿದ್ದಕಟ್ಟೆ ಧನ್ಯವಾದ ಸಲ್ಲಿಸಿದರು. ನಿತಿನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು