11:21 PM Saturday21 - December 2024
ಬ್ರೇಕಿಂಗ್ ನ್ಯೂಸ್
ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು… ಅರಣ್ಯ ಹಕ್ಕು ಕಾಯ್ದೆಯಡಿ ಇದುವರೆಗೆ 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಣೆ: ಸದನದಲ್ಲಿ ಸಿಎಂ… ರಾಜ್ಯದಲ್ಲಿ ಅನಧಿಕೃತವಾಗಿ ವಾಸವಿದ್ದ 24 ಪಾಕ್, 159 ಬಾಂಗ್ಲಾದೇಶ ಮೂಲದವರ ಬಂಧನ: ಗೃಹ…

ಇತ್ತೀಚಿನ ಸುದ್ದಿ

ಬಂಟ್ವಾಳದಲ್ಲಿ ವೆಂಕಟ್ರಮಣ ಸ್ವಾಮಿ ಟೆಂಪಲ್ ಪದವಿಪೂರ್ವ ಕಾಲೇಜು ಶುಭಾರಂಭ

19/06/2024, 18:49

ಬಂಟ್ವಾಳ(reporterkarnataka.com): ಬಂಟ್ವಾಳದಲ್ಲಿ ವೆಂಕಟ್ರಮಣಸ್ವಾಮಿ ಟೆಂಪಲ್ ಪದವಿಪೂರ್ವ ಕಾಲೇಜು ವಿಧ್ಯುಕ್ತವಾಗಿ ಬುಧವಾರ ಸರಸ್ವತಿ ಪೂಜೆಯೊಂದಿಗೆ ಶುಭಾರಂಭಗೊಂಡಿತು.
ಸುಮಾರು 132 ವರ್ಷಗಳ ಇತಿಹಾಸ ಹೊಂದಿರುವ ಬಂಟ್ವಾಳ ಎಸ್.ವಿ.ಎಸ್. ಟೆಂಪಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ಪದವಿಪೂರ್ವ ಕಾಲೇಜು ಪ್ರಾರಂಭವಾಗಿದೆ.
ಎಸ್.ವಿ.ಎಸ್.ಶಾಲೆಯ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಆಡಳಿತ ಮಂಡಳಿಯ ಪರವಾಗಿ ಕೋಶಾಧಿಕಾರಿ ಬಿ.ಸುರೇಶ್ ಬಾಳಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜ್ಞಾನ ಮತ್ತು ವಾಣಿಜ್ಯ ತರಗತಿಗಳ ಸಂಯೋಜನೆಗಳನ್ನು ಒಳಗೊಂಡ ಪದವಿ ಪೂರ್ವಕಾಲೇಜು ಬಂಟ್ವಾಳದ ಕೇಂದ್ರ ಪ್ರದೇಶವಾದ ಎಸ್.ವಿ.ಎಸ್.ಟೆಂಪಲ್ ಸ್ಕೂಲ್‌ನ ಕ್ಯಾಂಪಸ್‌ನಲ್ಲಿ ಆರಂಭಗೊಂಡಿದೆ. ಪಿಯುಸಿ ವಿದ್ಯಾಭ್ಯಾಸವನ್ನು ಮುಂದುವರಿಸುವ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ. ಉತ್ತಮ ವ್ಯವಸ್ಥೆಗಳೊಂದಿಗೆ ಒಳ್ಳೆಯ ಪರಿಸರ ಇದೆ ಎಂದರು. ಸಾಮಾಜಿಕ ಕಾರ್ಯಕರ್ತ ಪ್ರಭಾಕರ ಪ್ರಭುಗಳ ನಿರಂತರ ಪ್ರಯತ್ನದಿಂದ ಕಾಲೇಜು ತುರ್ತಾಗಿ ಆರಂಭಗೊಳ್ಳುವುದಕ್ಕೆ ಸಾಧ್ಯವಾಯಿತು ಎಂದು ಅವರನ್ನು ಅಭಿನಂದಿಸಿದರು.

ವೇದಿಕೆಯಲ್ಲಿ ಟ್ರಸ್ಟ್ ಅಧ್ಯಕ್ಷ ಅಶೋಕ ಶೆಣೈ, ಸಂಚಾಲಕ ಭಾಮಿ ನಾಗೇಂದ್ರನಾಥ ಶೆಣೈ, ಮ್ಯಾನೇಜಿಂಗ್ ಟ್ರಸ್ಟ್ ಸದಸ್ಯರಾದ ಸೂರ್ಯನಾರಾಯಣ ಬಾಳಿಗ , ಅವಿನಾಶ ಕಾಮತ್, ಲಕ್ಷ್ಮೀ ನಾರಾಯಣಯ್ಯ, ಬಿ.ಪ್ರಶಾಂತ ಪೈ, ಗಣೇಶ ಪೈ, ಸುಬ್ರಾಯ ನಾಯಕ್ ವೆಂಕಟ್ರಮಣ ಶೆಣೈ, ಭಾಮಿ ಲಕ್ಷ್ಮಣ ಶೆಣೈ, ಪ್ರಶಾಂತ ಕಿಣಿ ಉಪಸ್ಥಿತರಿದ್ದರು.
ಅರ್ಚಕರಾದ ಮುರಳೀಧರ ಭಟ್ ವೈದಿಕ ಪ್ರಾರ್ಥನೆಯೊಂದಿಗೆ ಸರಸ್ವತಿ ಪೂಜೆ ನೆರವೇರಿಸಿದರು. ಸಂಸ್ಥೆಯ ಉಪನ್ಯಾಸಕರು , ಸಿಬ್ಬಂದಿಗಳು ಮತ್ತು ದೇವಸ್ಥಾನದ ಆಡಳಿತ ವರ್ಗದವರು ಉಪಸ್ಥಿತರಿದ್ದರು. ನೂತನ ಕಾಲೇಜಿನ ಪ್ರಾಂಶುಪಾಲರಾದ ಕೆ.ಎನ್. ಗಂಗಾಧರ ಆಳ್ವ ಸ್ವಾಗತಿಸಿ ಪರಿಚಯಿಸಿದರು. ಉಪನ್ಯಾಸಕ ವೆಂಕಟೇಶ ನಾಯಕ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು